ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಹಲವು ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ , ಮೂವರಿಗೆ ಗಂಭೀರ ಗಾಯ – Vishwanews24

Featured, ರಾಷ್ಟ್ರ ನ್ಯೂಸ್

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಹಲವು ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ , ಮೂವರಿಗೆ ಗಂಭೀರ ಗಾಯ – Vishwanews24

ಚೆನ್ನೈ,: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್​ವೊಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿದೆ.

ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು ನಾಲ್ವರು ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್​ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿತ್ತು.

ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ಪತ್ತೆಯಾಗಲಿಲ್ಲ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಲ್ಲಾ ಅಭ್ಯರ್ಥಿಗಳು ಗೆಲ್ಲಲಿದ್ದಾರೆ  : ಎಂಬಿ ಪಾಟೀಲ್‌ – Vishwanews24