ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ : ಯಡಿಯೂರಪ್ಪ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ : ಯಡಿಯೂರಪ್ಪ ಸ್ಪಷ್ಟನೆ

ಯಾದಗಿರಿ: ಸೋಮಣ್ಣ ಕಾಂಗ್ರೆಸ್  ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ, ಇರುತ್ತಾರೆ ಕೂಡಾ. ಬೆಂಗಳೂರಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿ ಮಾಡಿ ಮಾತನಾಡುತ್ತೇನೆ. ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಾಗಳಿಗೆ ತೆರೆ ಎಳೆದರು. ಮಾಡಾಳ್ ವಿರೂಪಾಕ್ಷ  ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ವಾಸ್ತವಿಕ ಸ್ಥಿತಿ ಏನು ಎನ್ನುವುದು ನಿಮಗೇ ಗೊತ್ತಿದೆ. ಅದ್ದೂರಿ ಮೆರವಣಿಗೆ ಬಗ್ಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಒಟ್ಟಿನಲ್ಲಿ ಅವರಿಗೆ ಕೋರ್ಟಿನಿಂದ (Court) ರಿಲೀಫ್ ಸಿಕ್ಕಿದೆ. ಮಾಡಾಳ್ ಅವರ ಮೇಲೆ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು.

ನಾಳೆ ‘ಕಾಂಗ್ರೆಸ್’ ಕರೆ ನೀಡಿದ್ದ ‘ಕರ್ನಾಟಕ ಬಂದ್’ ವಾಪಾಸ್ : ಡಿ.ಕೆ ಶಿವಕುಮಾರ್  – Vishwanews24

ಮೋದಿ, ಅಮಿತ್ ಶಾ ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯನವರ  ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ, ಈ ರೀತಿ ಮಾತನಾಡುವುದು ಅವರ ಸ್ವಭಾವ. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಟೀಕೆ ಮಾಡಲು ಇಷ್ಟಪಡುವುದಿಲ್ಲ ಎಂದರು.

 

Leave a Reply