ಸೌಜನ್ಯಾ ಪ್ರಕರಣ: ಹಿಂದಿನ ತನಿಖಾಧಿಕಾರಿಗಳಿಗೆ ಎಸ್ಐಟಿ ನೋಟಿಸ್ – vishwanews24
ಸೌಜನ್ಯಾ ಪ್ರಕರಣ: ಹಿಂದಿನ ತನಿಖಾಧಿಕಾರಿಗಳಿಗೆ ಎಸ್ಐಟಿ ನೋಟಿಸ್
15ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗಲು ಸೂಚನೆ
2012ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಅತ್ಯಾಚಾರ-ಹತ್ಯೆ ಪ್ರಕರಣದ ಆರಂಭಿಕ ಹಂತದಿಂದ ಪೊಲೀಸ್ ಅಧಿಕಾರಿ, ಸಿಐಡಿ ಹಾಗೂ ಸಿಬಿಐ ವರೆಗೆ ತನಿಖೆಯ ವಿವಿಧ ಹಂತಗಳಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ :
ಸಿಆರ್ ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ. ಆಗಿನ ಬೆಳ್ತಂಗಡಿ ಠಾಣೆಯ ಇನ್ ಸ್ಪೆಕ್ಟರ್ ಭಾಸ್ಕರ್ ರೈ, ಪಿಎಸ್ಸೈ ಯೋಗೀಶ್, ಸಿಐಡಿ ತನಿಖಾಧಿಕಾರಿ ಡಿವೈಎಸ್ಪಿ ರುದ್ರಮುನಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೆ, ಆಗ ಬೆಳ್ತಂಗಡಿ ಠಾಣೆಯಲ್ಲಿ ಎಎಸ್ಸೈ ಆಗಿದ್ದ ಕಲೈಮಾರ್, ಮಹಿಳಾ ಹೆಡ್ ಕಾನ್ ಸ್ಟೇಬಲ್ ಸವಿತಾ ಶೆಟ್ಟಿ ಹಾಗೂ ಸಿಬ್ಬಂದಿಯಾದ ಸುಂದರ್ ಶೆಟ್ಟಿ, ಕೃಷ್ಣ, ರಿಷಬ್, ನವೀನ್ ಮತ್ತು ಭಾಸ್ಕರ್ ಅವರಿಗೂ ಎಸ್ಐಟಿ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆಯ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿದ್ದ ಬೆಳ್ತಂಗಡಿ ಪೊಲೀಸರು, ಸಿಐಡಿ ಮತ್ತು ಸಿಬಿಐನ ಇತರ ಅಧಿಕಾರಿಗಳಿಗೂ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ :
