ಸೌದಿ ಅರೇಬಿಯಾ: ಅಂತಾರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತ -Vishwanews24
ಸೌದಿ ಅರೇಬಿಯಾ: ಅಂತಾರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತ -Vishwanews24
ರಿಯಾದ್:ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಒಂದು ವಾರಗಳ ಕಾಲ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ.
ಅಪರೂಪದ ಘಟನೆ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ಅಂತಾರಾಷ್ಟ್ರೀಯ ಸಿನಿಮಾಗಳನ್ನು ತಾತ್ಕಾಲಿಕವಾಗಿ ಇನ್ನೂ ಒಂದು ವಾರಗಳ ಕಾಲ ಸಂಚಾರ ನಿಷೇಧಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ತಿಳಿಸಿದೆ.
ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ. ವೈರಸ್ನ ಸ್ವರೂಪದ ಬಗ್ಗೆ ವೈದ್ಯಕೀಯ ಮಾಹಿತಿ ಲಭ್ಯವಾಗುವವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯ ಮೇಲಿನ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆಯಿದೆ’ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ತಿಳಿಸಿದೆ.
ಅಷ್ಟೆ ಅಲ್ಲದೆ ಸೌದಿ ಅರೇಬಿಯಾವು ಭೂ ಮತ್ತು ಜಲ ಮಾರ್ಗಗಳನ್ನು ಒಂದು ವಾರದವರೆಗೆ ಮುಚ್ಚಿದೆ. ಕಳೆದ ಮೂರು ತಿಂಗಳಲ್ಲಿ ಐರೋಪ್ಯ ರಾಷ್ಟ್ರಗಳಿಂದ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಸರ್ಕಾರ ಆದೇಶಿಸಿದೆ.
ಆದರೆ ಸರಕು ಸಾಗಣೆ ವಿಮಾನ ಸೇವೆಗಳು ಎಂದಿನಂತೆ ಇರಲಿವೆ ಎಂದು ಸಚಿವಾಲಯವು ತಿಳಿಸಿದೆ.
