ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆಗೆ : ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24
ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆಗೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ವಿವಿಧ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ಸ್ಯಾಂಟ್ರೋ ರವಿ ಕೇಸ್ ಅನ್ನು, ಸಿಐಡಿಗೆ ವರ್ಗಾವಣೆಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಹೀಗಾಗಿ ಕೆಲವೇ ದಿನಗಳಲ್ಲಿ ಕುಖ್ಯಾತ ವಂಚಕ, ಅಕ್ರಮಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಲಿದೆ.
ಈ ಸಂಬಂಧ ಗೃಹ ಇಲಾಖೆಯ ಸಚಿವ ಅರಗ ಜ್ಞಾನೇಂದ್ರ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲೇ ಪ್ರಕರಣ ಸಂಬಂಧ ಬಂಧಿರುವಂತ ದೂರುಗಳ ಬಗ್ಗೆಯೂ ತನಿಖೆ ನಡೆಸುವಂತೆ ತಿಳಿಸಲಾಗಿದೆ.
ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ಆಸ್ಪತ್ರೆಯಲ್ಲಿ ಕಳ್ಳತನ : ರೋಗಿಗಳ ಚಿನ್ನಾಭರಣ ಕದ್ದು ಪರಾರಿ- Vishwanews24
ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಅಲ್ಲದೇ ಇಂದು ಜನವರಿ 25ರವರೆಗೆ ಅವರಿಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಮೈಸೂರು ಜಿಲ್ಲಾ ನ್ಯಾಯಾಲಯವು ಆದೇಶಿಸಿತ್ತು.
ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ನಾನು ಬದುಕಲು ಇಚ್ಛಿಸುವುದಿಲ್ಲ : ಆರಗ ಜ್ಞಾನೇಂದ್ರ – Vishwanews24
ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಸ್ಯಾಂಟ್ರೋ ರವಿ ಕೇಸ್ ಅನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದ್ರೇ ನ್ಯಾಯಾಧೀಶರು ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ ಎಂಬುದಾಗಿ ಹೇಳಿತ್ತು. ಈ ಬೆನ್ನಲ್ಲೇ ಗೃಹ ಇಲಾಖೆ ಸಚಿವರು ಸಿಐಡಿಗೆ ಪ್ರಕರಣ ವರ್ಗಾವಣೆ ನೀಡುವಂತೆ ನಿರ್ದೇಶಿಸಿದ್ದಾರೆ.
Join our Whatsapp group by clicking the below link 👇👇
