ಸ್ವಬಲದಿಂದ ಕೆಲಸ ಮಾಡಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತೇವೆ : ಸಂಜಯ್ ರಾವತ್ – Vishwanews24

Featured, ರಾಷ್ಟ್ರ ನ್ಯೂಸ್

ಅಧಿಕಾರವೇ ಶಿವಸೇನೆಗಾಗಿ ಹುಟ್ಟಿದೆಯೇ ಹೊರತು ಅಧಿಕಾರಕ್ಕಾಗಿ ಶಿವಸೇನೆ ಹುಟ್ಟಿಲ್ಲ..

ಸ್ವಬಲದಿಂದ ಕೆಲಸ ಮಾಡಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತೇವೆ..

ಮುಂಬೈ: ಅಧಿಕಾರವೇ ಶಿವಸೇನೆಗಾಗಿ ಹುಟ್ಟಿದೆಯೇ ಹೊರತು ಅಧಿಕಾರಕ್ಕಾಗಿ ಶಿವಸೇನೆ ಹುಟ್ಟಿಲ್ಲ ಎಂಬುದು ಬಾಳಾ ಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಸ್ವಬಲದಿಂದ ಕೆಲಸ ಮಾಡಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಬುಧವಾರ ಸಂಜೆ ರಾಜೀನಾಮೆ ಪತ್ರ ಸಲ್ಲಿಸುವ ವೇಳೆ ನಾವೆಲ್ಲ ಭಾವುಕರಾಗಿದ್ದೆವು. ಉದ್ದವ್ ಠಾಕ್ರೆ ಮಹಾರಾಷ್ಟ್ರದಲ್ಲಿ ಮಾಡಿದ ಜನಪರ ಕೆಲಸ ನೋಡಿ ಪ್ರತಿಯೊಬ್ಬರೂ ಅವರ ಮೇಲೆ ಅಗಾಧ ನಂಬಿಕೆ ಇರಿಸಿದ್ದರು. ಎಲ್ಲಾ ಜಾತಿ, ಧರ್ಮದ ಜನರು ಅವರನ್ನು ಒಪ್ಪಿಕೊಂಡಿದ್ದರು. ಸೋನಿಯಾ ಗಾಂಧಿ, ಶರದ್ ಪವಾರ್‍ ಅವರ ಮೇಲೆ ಇಟ್ಟ ನಂಬಿಕೆಗೆ ನಾವು ಆಭಾರಿಯಾಗಿದ್ದೇವೆ ಎಂದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ – Vishwanews24

Leave a Reply