ಸ್ವಾತಂತ್ರ್ಯದಿನಾಚರಣೆ : ವಿವಾದದ ನಡುವೆಯೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಹಾರಿದ ತಿರಂಗಾ -Vishwanews24
ಸ್ವಾತಂತ್ರ್ಯದಿನಾಚರಣೆ : ವಿವಾದದ ನಡುವೆಯೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಹಾರಿದ ತಿರಂಗಾ -Vishwanews24
ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಕೊನೆಗೂ 76ನೇ ಸ್ವಾತಂತ್ರ್ಯದಿನಾಚರಣೆ ಸಂಭ್ರಮದ ದಿನದಂದು ತ್ರಿವರ್ಣ ಧ್ವಜಾರೋಹಣವಾಗಿದೆ.
ಜಾಗದ ಒಡೆತನ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸೋಮವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.
ಮೈದಾನದಲ್ಲಿ ಜರುಗಿದ ಕಾರ್ಯಕ್ರಮಮದಲ್ಲಿ ಬೆಂಗಳೂರು ನಗರ ಉಪ ವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಸರ್ಕಾರದ ವತಿಯಿಂದಲೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್ ಖಾನ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಹಾಗೂ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
