ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನ : ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಸಮರ್ಪಣೆಯನ್ನು ಸದಾ ಸ್ಮರಿಸುತ್ತೇವೆ : ಪ್ರಧಾನಿ ಮೋದಿ-Vishwanews24
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನ : ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಸಮರ್ಪಣೆಯನ್ನು ಸದಾ ಸ್ಮರಿಸುತ್ತೇವೆ : ಪ್ರಧಾನಿ ಮೋದಿ-Vishwanews24
ನವದೆಹಲಿ : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನದಂದು ಅವರನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಸ್ಮರಿಸಿದ್ದಾರೆ.
‘ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತ ಮಾತೆಯ ನಿಜವಾದ ಪುತ್ರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದಂದು ಅವರಿಗೆ ನಮನಗಳು. ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಸಮರ್ಪಣೆಯನ್ನು ಸದಾ ಸ್ಮರಿಸುತ್ತೇವೆ’ ಎಂದು ಪಿಎಂ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪಿಎಂ ಮೋದಿ ಅವರು ಕೋಲ್ಕತ್ತಾದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಜಯಂತಿಯ ಹಿನ್ನೆಲೆಯಲ್ಲಿ ಪರಾಕ್ರಮ ದಿವಸ್ ಆಚರಣೆಯಲ್ಲಿದ್ದು, ರಾಷ್ಟ್ರೀಯ ಗ್ರಂಥಾಲಯದಲ್ಲಿ ಮತ್ತು ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಬೋಸ್ ಅವರ ಜಯಂತಿ ಆಚರಣೆ ಮಾಡಲಿದ್ದಾರೆ. ವಾರ್ಷಿಕೋತ್ಸವದ ಕಾರ್ಯಕ್ರಮಗಳನ್ನು ರೂಪಿಸಲು ಕೇಂದ್ರ ಸರ್ಕಾರ ಒಂದು ಸಮಿತಿಯನ್ನೂ ರಚಿಸಿದೆ.
ಲಾರಿ ಚಾಲಕನ ಅವಾಂತರ-ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸೈ ರಾಘವೇಂದ್ರ ಸಿ .-vishwanews24
