ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು : ಡಿ.ಕೆ.ಶಿ ಮನವಿ – vishwanews24

Featured, ರಾಜ್ಯ ನ್ಯೂಸ್

ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು : ಡಿ.ಕೆ.ಶಿ ಮನವಿ

ಬೆಂಗಳೂರು: ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಬಂದಿರುವ ಹಕ್ಕು. ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು’ ಎಂದರು.

20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು – vishwanews24

Leave a Reply