ಹರಿಯಾಣ ವಿಧಾನಸಭೆ ಚುನಾವಣೆ : ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – vishwanews24
ಹರ್ಯಾಣ ಚುನಾವಣೆ : ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಹರ್ಯಾಣ ವಿಧಾನಸಭೆ ಚುನಾವಣೆ 2024ಕ್ಕೆ ಆಡಳಿತಾರೂಢ ಪಕ್ಷ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅಕ್ಟೋಬರ್ 5ರಂದು ಒಂದೇ ಹಂತದಲ್ಲಿ ಹರ್ಯಾಣ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ಹರ್ಯಾಣ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ ಹಲವಾರು ಹಿರಿಯ ನಾಯಕರ ಹೆಸರು ಘೋಷಣೆಯಾಗಿದೆ. ಪ್ರಸ್ತುತ ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬದಲಾಯಿಸಿದ್ದಾರೆ. ಅವರು ಲಾಡ್ವಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.
ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – vishwanews24
ರಾಜ್ಯದಲ್ಲಿಯೇ ಟಿಕೆಟ್‌ಗಾಗಿ ಭಾರೀ ಪೈಪೋಟಿ ಎದುರಾಗಿದ್ದ ಕ್ಷೇತ್ರ ಬಾದಶಹಪುರ. ಮೊದಲ ಪಟ್ಟಿಯಲ್ಲಿಯೇ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಮತದಾರರು ಇರುವ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾವ್ ನರಬೀರ್ ಸಿಂಗ್ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ.
