ಹಸಿದವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು ನಮ್ಮ ಸಿದ್ದರಾಮಯ್ಯ ಸರ್ಕಾರ : ಜಮೀರ್ ಅಹ್ಮದ್ – Vishwanews24
ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರ್ಕಾರ
ಕಲಬುರಗಿ: ರಾಜ್ಯದಲ್ಲಿ 2013 ರಿಂದ 2018ರವರೆಗೂ ಹಸಿದವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು,ನಮ್ಮ ಸಿದ್ದರಾಮಯ್ಯ ಅವರ ಸರ್ಕಾರವೆಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಬಡವರಿಗೆ ನೀಡಿದೆ. ಇವುಗಳು ಹೇಳಿಕೊಳ್ಳುವಂತಹ ಯೋಜನೆಗಳಾಗಿವೆ ಎಂದರು.
ಮುಸ್ಲಿಮರು ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಸಾರೇ ಜಹಾಂಸೆ ಅಚ್ಛಾ, ಹಿಂದೂಸ್ಥಾನ ಹಮಾರಾ ಎಂದು ಇಸ್ಲಾಂ ಧರ್ಮ ಹೇಳಿದ್ದು, ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರ್ಕಾರವೆಂದು ಹೇಳಿದರು.
ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕರ್ನಾಟಕದ ಜನರು ಈ ಬಾರಿ ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
