ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ – vishwanews24
ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ
ಹಾಸನ: ಹಾಸನದ ಹಾಸನಾಂಬ ದೇಗುಲದ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಾಯಿತು. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಬಾಗಿಲು ತೆರೆಯಲಾಯಿತು. ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್ 2 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಇದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ ರಾಜಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ, ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು.
ಹಾಸನಾಂಬ ಜಾತ್ರೆಗೆ ಕೆಲವು ದಿನಗಳಿಂದ ಸಿದ್ಧತೆಗಳು ಭರದಿಂದ ಸಾಗಿದ್ದವು. ಸದ್ಯ ವಿಶೇಷ ಹೂವಿನ ಅಲಂಕಾರದಿಂದ ದೇವಸ್ಥಾನ ಕಂಗೊಳಿಸುತ್ತಿದೆ.
ದೇರಳಕಟ್ಟೆ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು – vishwanews24
ಸುಗಮ ದರ್ಶನಕ್ಕೆ ಕ್ಯೂ ಆರ್ ಕೋಡ್ ವ್ಯವಸ್ಥೆ
ಕಳೆದ ಬಾರಿ ಶಕ್ತಿ ಯೋಜನೆಯ ಪರಿಣಾಮ ಕಾರಣದಿಂದ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಹಾಗು ಭಕ್ತರು ಆಗಮಿಸಿದ್ದರು. ಬರೊಬ್ಬರಿ 14 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಹಾಗಾಗಿ ಈ ವರ್ಷ ಕೂಡ ಸುಮಾರು 20ರಿಂದ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯೊಂದಿಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು 10 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ, ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಗಣ್ಯರು ಅತಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಸುಗಮ ದರ್ಶನಕ್ಕೆ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿಶೇಷ ದರ್ಶನಕ್ಕೆ ಪಾಸ್ ಪಡೆಯುವವರು, ಹಣ ನೀಡಿ ವಿಶೇಷ ಪಾಸ್ ಪಡೆದು ದರ್ಶನ ಮಾಡ ಬಯಸುವವರಿಗಾಗಿ ಕ್ಯೂ ಆರ್ ಕೋಡ್ ಒಳಗೊಂಡ ಪಾಸ್ ಮಾಡಲಾಗಿದ್ದು ಅವರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಸುವ ಸಾಧ್ಯತೆ ಹಿನ್ನೆಲೆಯಲ್ಲಿ ದಿನದ 24 ಗಂಟೆಯೂ ಕೂಡ ದೇವಿ ದರ್ಶನಕ್ಕೆ ಅವಕಾಶ ಇದ್ದು, ಅದಕ್ಕಾಗಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಲಿಪೊಲೀಸರು ಕಂದಾಯ ಇಲಾಖೆ ಸಿಬ್ಬಂದಿ, ಹಾಗೂ ಸ್ವಯಂಸೇವಕರನ್ನು ಸನ್ನದ್ಧಗೊಳಿಸಲಾಗಿದೆ.
ಹಾಸನಾಂಬ ದರ್ಶನ ಸಮಯ
ಸಾಮಾನ್ಯವಾಗಿ ಹಾಸನಾಂಬ ದೇಗುಲದಲ್ಲಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಾರಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರವಲ್ಲದೆ, ನೈವೇದ್ಯದ ಸಮಯ ಹೊರತುಪಡಿಸಿ ಉಳಿದಂತೆ ಎಲ್ಲಾ ಅವಧಿಯಲ್ಲೂ (ದಿನ ಪೂರ್ತಿ) ದರ್ಶನಕ್ಕೆ ಅವಕಾಶವಿದೆ.
ನೇರ ದರ್ಶನಕ್ಕೆ 1000 ರೂ. ಟಿಕೆಟ್
ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ದೇಗುಲವನ್ನು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಇಡೀ ದೇಗುಲದ ಆವರಣ ನಳ ನಳಿಸುವಂತೆ ಮಾಡಲಾಗಿದೆ. ಹಲವು ಹೈಟೆಕ್ ವ್ಯವಸ್ಥೆಗಳೊಂದಿಗೆ ಈ ವರ್ಷದ ಹಾಸನಾಂಬೆ ಉತ್ಸವ ಆರಂಭವಾಗಿದೆ.
