ಹಾಸನ:  ಚಾಲಕನ ನಿಯಂತ್ರಣ ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್‌ ಪಲ್ಟಿ: ನಾಲ್ವರು ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಗಾಯ – Vishwanews24

Featured, ರಾಜ್ಯ ನ್ಯೂಸ್

ಹಾಸನ:  ಚಾಲಕನ ನಿಯಂತ್ರಣ ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್‌ ಪಲ್ಟಿ: ನಾಲ್ವರು ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಶನಿವಾರ (ಡಿ.24 ರಂದು) ನಡೆದಿದೆ.

ಕನಕಪುರದಿಂದ ಬುಧವಾರ ಎರಡು ಬಸ್‌ಗಳಲ್ಲಿ ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಬಸ್ ಪಲ್ಟಿಯಾಗಿದೆ.

ಈ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಗಾಯಗೊಂಡಿದ್ದು ಗಾಯಾಳುಗಳಿಗೆ ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ಕನಕಪುರದ ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ಮಕ್ಕಳು ಹಾಗೂ ಶಿಕ್ಷಕರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ.

ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Leave a Reply