ಹಿಂದಿನ ಸಿದ್ದರಾಮಯ್ಯ ಸರ್ಕಾರದಿಂದ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. : ದಿನೇಶ್ ಗುಂಡೂರಾವ್ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: :ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಬುಧವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅ,26 ರ ಶುಕ್ರವಾರ ಮಾತನಾಡಿದ ಅವರು, ಹಿಂದಿನ ಸಿದ್ದರಾಮಯ್ಯ ಸರ್ಕಾರವೂ ಕರಾವಳಿಗೆ, ಮಂಗಳೂರಿಗೆ ಸಾಕಷ್ಟು ಅನುದಾನ ನೀಡಿದೆ. ಕಳೆದ ಐದು ವರ್ಷದಲ್ಲಿ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ಬಾರಿ ಪಕ್ಷ ಒಗ್ಗಟ್ಟಿನಿಂದ ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸುತ್ತಿದ್ದು ಕಳೆದ ಸಾಲಿಗಿಂತ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ ಎಂದು ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸರಕಾರ ಇನ್ನು ಟೇಕಾಫ್ ಆಗಿಲ್ಲ ಬೇಕಾಗಿಲ್ಲ ಸಚಿವ ಸಂಪುಟದಲ್ಲಿ ಒಗ್ಗಟ್ಟಿನಿಂದ ಕೆಲಸವಾಗುತ್ತಿಲ್ಲ. ಉಸ್ತುವಾರಿ ಸಚಿವರು,ಸಚಿವ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿಲ್ಲ. ಒಟ್ಟಾರೆಯಾಗಿ ರಾಜ್ಯ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.