ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಸರ್ಕಾರದ ಮುಖ್ಯ ಅಜೆಂಡ  : ಕೆ.ಎಸ್.ಈಶ್ವರಪ್ಪ – vishwanews24

Featured, ರಾಜ್ಯ ನ್ಯೂಸ್

ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಸರ್ಕಾರದ ಮುಖ್ಯ ಅಜೆಂಡವಾಗಿದ್ದು, ಜಾತಿ ಜನಗಣತಿ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22ರಿಂದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಜಾತಿ ಗಣತಿಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ.

ಸಿದ್ದರಾಮಯ್ಯಗೆ ಸಿಎಂ ಕುರ್ಚಿ ಮೇಲೆ ಮಾತ್ರ ಆಸೆ ಇದೆ. ಮುಖ್ಯಮಂತ್ರಿ ಸ್ಥಾನ ಹೋಗುತ್ತೆ ಎಂಬ ಕಾಂತರಾಜ್ ವರದಿ ಒಪ್ಪಿಕೊಳ್ಳದೆ ಪುನಃ ಜಾತಿ ಜನಗಣತಿಗೆ ಅದೇಶ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾತಿ ಜನಗಣತಿ ಹೊರ ಬರಲು ಸಾಧ್ಯವಿಲ್ಲ ಎಂದು ಟೀಕಿಸಿದರು.ಆರೋಪ-ಪ್ರತ್ಯಾರೋಪ ಬಿಟ್ಟು ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಿ: ಶಿವಮೊಗ್ಗದ ವಿಮಾನ ನಿಲ್ದಾಣ ಆರಂಭಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಬ್ಬರ ಕೊಡುಗೆಯೂ ಇದೆ. ವಿಮಾನ ನಿಲ್ದಾಣ ವಿಚಾರದಲ್ಲಿ ರಾಜಕೀಯ ಮಾಡದೆ ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಇಬ್ಬರೂ ಕೂತು ಚರ್ಚೆ ನಡೆಸಿ ಅಭಿವೃದ್ಧಿಪಡಿಸಬೇಕು ಎಂದು ಕೆ.ಎಸ್‌.ಈಶ್ವರಪ್ಪ ಸಲಹೆ ನೀಡಿದರು.

Leave a Reply