ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ಇಲ್ಲ : ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ – Vishwanews24
ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು..
ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ..
ಬೆಂಗಳೂರು : ಉಡುಪಿಜಿಲ್ಲೆಯಲ್ಲಿ ಹಿಜಾಬ್ ಧರಿಸೋ ವಿವಾದ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ಹೊರಡಿಸಿದೆ.
ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಹೈಕೋರ್ಟ್ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.
ಇದನ್ನೂ ಓದಿ :
