ಹಿಜಾಬ್ ಪ್ರಕರಣ : ಹೋಳಿ ಹಬ್ಬ ಮುಗಿದ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು : ಸುಪ್ರೀಂ – Vishwanews24

Featured, ರಾಷ್ಟ್ರ ನ್ಯೂಸ್

ಹಿಜಾಬ್ ಪ್ರಕರಣ ಆದೇಶದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆಅವಕಾಶವಿಲ್ಲ ಎಂದು ಕರ್ನಾಟಕ ಸರ್ಕಾರದ ಆದೇಶವನ್ನು ಪುರಸ್ಕರಿಸಿ ತೀರ್ಪು ನೀಡಿದ ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತ್ವತ್ವದ ನ್ಯಾಯಪೀಠ ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರ ಅರ್ಜಿ ಸಲ್ಲಿಕೆಯನ್ನು ಪುರಸ್ಕರಿಸಿ ಸದ್ಯದಲ್ಲಿಯೇ ಪರೀಕ್ಷೆಗಳು ಇರುವುದರಿಂದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜ್ : ಮುಂದುವರಿದ ಹಿಜಾಬ್ ವಿವಾದ ; ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು – Vishwanews24

ಹಲವು ವಿದ್ಯಾರ್ಥಿನಿಯರಿಗೆ ಈಗ ಪರೀಕ್ಷೆಯ ಸಮಯ, ಹೀಗಾಗಿ ಹಿಜಾಬ್ ಅರ್ಜಿಯನ್ನು ತುರ್ತಾಗಿ ನಡೆಸಬೇಕೆಂದು ಹಿರಿಯ ವಕೀಲ ಸಂಜಯ್ ಹೆಗ್ಡೆ ನ್ಯಾಯಪೀಠದ ಮುಂದೆ ಮನವಿ ಮಾಡಿಕೊಂಡಿದ್ದಾರೆ. ನಮಗೆ ಸ್ವಲ್ಪ ಸಮಯ ಕೊಡಿ, ನೋಡೋಣ, ಹೋಳಿ ಹಬ್ಬದ ನಂತರ ಅರ್ಜಿ ವಿಚಾರಣೆ ನಡೆಸೋಣ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

ಸಂವಿಧಾನದ ವಿಧಿ 25ರಡಿಯಲ್ಲಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ನಿನ್ನೆ ತೀರ್ಪು ನೀಡಿತ್ತು. ಉಡುಪಿಯ ಸರ್ಕಾರಿ ಪದವಿಪೂರ್ವ ಹೆಣ್ಣುಮಕ್ಕಳ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವುದು ಒಂದು ಕಾರಣಬದ್ಧ ನಿರ್ಬಂಧವಾಗಿದ್ದು ಸಾಂವಿಧಾನಿಕವಾಗಿ ಅನುಮತಿಬದ್ಧವಾಗಿದ್ದು ವಿದ್ಯಾರ್ಥಿಗಳು ಅದಕ್ಕೆ ಆಕ್ಷೇಪ ಸಲ್ಲಿಸಲು ಸಾಧ್ಯವಿಲ್ಲ ಎಂದು ನಿನ್ನೆ ಹೈಕೋರ್ಟ್ ಹೇಳಿದೆ.

ಕುಂದಾಪುರ ಹಿಜಾಬ್ ಪ್ರಕರಣ :ಹಿಜಾಬ್ ತೆಗೆಯಲು ಒಪ್ಪದ 11 ಮಂದಿ ವಿದ್ಯಾರ್ಥಿನಿಯರು ತರಗತಿಗೆ ಗೈರು; ಇಬ್ಬರು ಹಾಜರು – Vishwanews24

Leave a Reply