ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ – vishwanews24
ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ..
ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ..
ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ..
ನವದೆಹಲಿ: ಚಂದನವನದ ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಅನುಪಮ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಈ ಕುರಿತು ಭಾರತೀಯ ವಾರ್ತಾಶಾಖೆ ಪಿಐಬಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಹಲವಾರು ತಲೆಮಾರುಗಳಿಗೆ ಸ್ಫೂರ್ತಿಯಾಗಿರುವ ಅವರ ಅದ್ಭುತ ಸಿನಿಮಾ ಪಯಣಕ್ಕಾಗಿ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ ಅನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿರುವುದಾಗಿ ತಿಳಿಸಿದೆ.
ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ: ಗುಜರಾತ್‌ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ: ಸೆಪ್ಟೆಂಬರ್ 4, 1948 ರಂದು ಜನಿಸಿದ ಅನಂತ ನಾಗ್ (ಮೂಲ ಹೆಸರು ಅನಂತ ನಾಗರಕಟ್ಟೆ), ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರಾಗಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 250ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು ಸೇರಿದಂತೆ ಒಟ್ಟು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರ ಅಭಿನಯಿಸಿರುವ ಸಿನಿಮಾಗಳಲ್ಲಿ ಹಿಂದಿ, ತೆಲುಗು, ತಮಿಳು, ಮರಾಠಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಯ ಚಿತ್ರಗಳೂ ಸೇರಿವೆ.
ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕೊಲೆ ಮಾಡಿ ಗಂಡ ಪರಾರಿ – vishwanews24
