ಹುಬ್ಬಳ್ಳಿ ನೇಹಾ ಹಿರೇಮಠ  ಹತ್ಯೆ ಪ್ರಕರಣ : ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ : ನೇಹಾ ತಂದೆ ಆರೋಪ – vishwanews24

Featured, ರಾಜ್ಯ ನ್ಯೂಸ್

ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು :  ನೇಹಾ ತಂದೆ ನಿರಂಜನ್​ ಹಿರೇಮಠ ಆಗ್ರಹ

ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹಿರೇಮಠ  ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ ನಿರಂಜನ್​ ಹಿರೇಮಠ ಆಗ್ರಹಿಸಿದರು.

2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್​ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.

ಸಂಗೀತ ಕಾರ್ಯಕ್ರಮದ ವೇಳೆ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು – vishwanews24

ಕಾಂಗ್ರೆಸ್ ಮುಖಂಡ ಮತ್ತು ಪಾಲಿಕೆ ಸದಸ್ಯ, ನೇಹಾ ತಂದೆ ನಿರಂಜನ್​ ಹಿರೇಮಠ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿ, ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿದ್ದರು. ಆದರೆ, ಇಲ್ಲಿಯವರೆಗೂ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಕಂಡಿಲ್ಲ ಮತ್ತು ಪಾಸ್ಟ್‌ಟ್ರ್ಯಾಕ್ ಕೋರ್ಟ್ ನಿರ್ಮಾಣವಾಗಿಲ್ಲ. ಹೀಗಾಗಿ ನೇಹಾ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ನೇಹಾ ತಂದೆ ನಿರಂಜನ್​ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ 120 ದಿನಗಳಲ್ಲಿ ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಒಂಬತ್ತು ತಿಂಗಳು ಕಳೆದರೂ ನನ್ನ ಮಗಳ‌ ಸಾವಿಗೆ ನ್ಯಾಯ ಸಿಗುವ ಭರವಸೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಹಾಗೂ ಸಿಐಡಿಯಿಂದ ನ್ಯಾಯ ಸಿಗುವ ಭರವಸೆ ಕ್ಷೀಣಿಸುತ್ತಿದೆ. ಈ‌ ಕಾರಣದಿಂದಾಗಿಯೇ ಈ‌ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸಿದರೆ ಮಾತ್ರ ನನ್ನ ಮಗಳ‌ ಸಾವಿಗೆ ನ್ಯಾಯ ಸಿಗುತ್ತದೆ ಎಂದರು.

ಉಡುಪಿ : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ ಪ್ರಕರಣ – ಆರೋಪಿ ಬಂಧನ – vishwanews24

Leave a Reply