ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳು ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ ..

Featured, ಜಿಲ್ಲೆ, ರಾಜ್ಯ ನ್ಯೂಸ್

ಬೆಂಗಳೂರು: ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಯಿತು. ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗ ಮಠದಿಂದ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ರಸ್ತೆಮಾರ್ಗದಲ್ಲಿ ಕರೆತರಲಾಯಿತು.

ಸ್ವಾಮೀಜಿ ಆರೋಗ್ಯ ತಪಾಸಣೆ ನಡೆಸಿದ ಬೆಂಗಳೂರು ಮತ್ತು ಚೆನ್ನೈನ ತಜ್ಞ ವೈದ್ಯರು ಅವರನ್ನು ವಾಯುಮಾರ್ಗದ ಮೂಲಕ ಚೆನ್ನೈಗೆ ಕರೆದೊಯ್ಯುವ ನಿರ್ಧಾರ ತೆಗೆದುಕೊಂಡರು. ಕಳೆದ ಶನಿವಾರವಷ್ಟೇ ಸ್ವಾಮೀಜಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರ ಯಕೃತ್‌ಗೆ ಸ್ಟಂಟ್‌ಗಳನ್ನು ಅಳವಡಿಸಲಾಗಿತ್ತು.

2016ರಲ್ಲಿ ಮೊದಲ ಬಾರಿಗೆ ಸ್ಟಂಟ್‌ ಅಳವಡಿಸಿದ ನಂತರ ಪದೇಪದೆ ಸೋಂಕಿನ ಕಾರಣಕ್ಕೆ ಜ್ವರ ಅವರನ್ನು ಬಾಧಿಸುತ್ತಿತ್ತು. ಸ್ವಾಮೀಜಿಯ ವಯಸ್ಸು ಈಗ 111 ವರ್ಷ. ಅವರಿಗೆ ಹೈಪರ್‌ಟೆನ್ಷನ್ (ಬಿಪಿ) ಅಥವಾ ಡಯಾಬಿಟಿಸ್ (ಶುಗರ್) ಸಮಸ್ಯೆ ಇಲ್ಲ. ಯಕೃತ್ತಿನ ಸಮಸ್ಯೆಯೊಂದು ಬಹುಕಾಲದಿಂದ ಬಾಧಿಸುತ್ತಿದೆ.

ಸ್ವಾಮೀಜಿ ಶೀಘ್ರ ಗುಣಮುಖರಾಗಬೇಕು ಎಂದು ರಾಜ್ಯದ ವಿವಿಧೆಡೆ ಭಕ್ತರು ಇಷ್ಟದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

https://twitter.com/HeloKannada/status/1070936606855626752