ಹೆಚ್‌.ಡಿ ರೇವಣ್ಣ ಜೈಲಿನಿಂದ ಬಿಡುಗಡೆ – Vishwanews24

Featured, ರಾಜ್ಯ ನ್ಯೂಸ್

ಹೆಚ್‌.ಡಿ ರೇವಣ್ಣ ಜೈಲಿನಿಂದ ಬಿಡುಗಡೆ

ಬೆಂಗಳೂರು: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಮಾಧ್ಯಮಗಳತ್ತ ಕೈ ಮುಗಿದು ಮುಂದೆ ಸಾಗಿದರು. ರೇವಣ್ಣ ಬರುವಿಕೆಗಾಗಿ ಅಭಿಮಾನಿಗಳು ಜೈಲಿನ ಹೊರಗೆ ಕಾಯುತ್ತಿದ್ದರು. ಹೀಗಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು.

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ – Vishwanews24

ಜೈಲಿನಿಂದ ಹೊರಬಂದ ರೇವಣ್ಣ ಅವರಿಗೆ ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ ರೇವಣ್ಣ ಬರುತ್ತಿದ್ದಂತೆಯೇ ನೂಕುನುಗ್ಗಲು ಆರಂಭವಾಗಿದೆ. ಹೀಗಾಗಿ ಕಾರಿನ ಗ್ಲಾಸ್‌ ಇಳಿಸಿ ಕೈ ಮುಗಿದು ಹೊರಟರು.

Leave a Reply