ಹೈಕೋರ್ಟಿನಿಂದ ಡಿಕೆ ಶಿವಕುಮಾರ್ ಗೆ ಷರತ್ತು ಬದ್ದ ಜಾಮೀನು ಮಂಜೂರು -Vishwanews24
ನವದೆಹಲಿ:ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಐಪಿಸಿ ಸೆಕ್ಷನ್ 120 ಬಿ ಬಗ್ಗೆ ವಿವರಣೆ ನೀಡಿ ತೀರ್ಪನ್ನು ಪ್ರಕಟಿಸಿದರು. ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.
ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ಅವರು ತೀರ್ಪನ್ನು ಪ್ರಕಟಿಸಿದ್ದು, ಶಾಸಕ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ನೀಡುವುದಕ್ಕೆ ಒಪ್ಪಿಕೊಂಡಿದ್ದು, ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಜಾರಿ ನಿರ್ದೇಶನಾಲಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ವಾದ ಮಂಡಿಸಿದ್ದರು. ಈ ಎಲ್ಲಾ ವಾದದ ಬಳಿಕ ಹೈಕೋರ್ಟ್ ನ್ಯಾಯ ಮೂರ್ತಿ ಸುರೇಶ್ ಕುಮಾರ್ ಕೈಟ್ ಡಿಕೆ ಶಿವಕುಮಾರ್ ಅವರಿಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದರು,
