₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

Featured, ದಕ್ಷಿಣ ಕನ್ನಡ

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!

ಬಂಟ್ವಾಳ: ಸುಮಾರು ₹26.18 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಬಂಟ್ವಾಳ ರೈಲು ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. 2024ರಲ್ಲಿ ಈ ಯೋಜನೆಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 17ರಂದು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದಡಿ ಬಂಟ್ವಾಳ ನಿಲ್ದಾಣವನ್ನು ಆಧುನೀಕರಿಸಲಾಗಿದೆ. ನೈಋತ್ಯ ರೈಲ್ವೆ ವಲಯದಲ್ಲಿ ಈ ಯೋಜನೆಯಡಿ ಅಭಿವೃದ್ಧಿಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ನವೀಕರಣದ ಭಾಗವಾಗಿ ಕಾಯುವಿಕೆ ಕೊಠಡಿ, ಟಿಕೆಟ್ ಕೌಂಟರ್‌ಗಳು, ಸುಧಾರಿತ ಆಸನ ವ್ಯವಸ್ಥೆ, ಪ್ರತ್ಯೇಕ ವಾಹನ ನಿಲುಗಡೆ ಹಾಗೂ ಪಿಕಪ್-ಡ್ರಾಪ್ ವಲಯಗಳನ್ನು ನಿರ್ಮಿಸಲಾಗಿದೆ. ಜೊತೆಗೆ ಫ್ಲಾಟ್‌ಫಾರ್ಮ್ ಶೆಲ್ಟರ್‌ಗಳು, ಎಲ್‌ಇಡಿ ದೀಪಗಳು, ಆಧುನಿಕ ಪೀಠೋಪಕರಣಗಳು ಮತ್ತು ಸುಂದರ ಪ್ರವೇಶ-ನಿರ್ಗಮನ ದ್ವಾರಗಳು ನಿಲ್ದಾಣದ ಸೌಂದರ್ಯವನ್ನು ಹೆಚ್ಚಿಸಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮಾಹಿತಿ ಫಲಕಗಳು, ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಹಾಗೂ ಗಡಿಯಾರಗಳನ್ನು ಅಳವಡಿಸಲಾಗಿದೆ. ದೇಶಾದ್ಯಂತ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾದ 75 ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಅವರು ಜುಲೈ 17ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

Leave a Reply