Featured

ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು – vishwanews24

ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು

ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ  ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ.

ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್‌ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿಡಿಯೋ ವೈರಲ್‌:
ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಇನ್ನು ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago