ಲಖನೌ: ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಗವಿಕಲೆಯೊಬ್ಬರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದು, ಇದರ ಫೋಟೋ ಭಾರಿ ವೈರಲ್ ಆಗಿದೆ.
ಪ್ರಧಾನಿಯವರನ್ನು ಭೇಟಿಯಾಗಲು ಬಂದಿದ್ದ ಶಿಖಾ ರಸ್ತೋಗಿ ಎಂಬ ಮಹಿಳೆಯ ಕಾಲಿಗೆ ಪ್ರಧಾನಿ ನಮಸ್ಕರಿಸಿದ್ದಾರೆ.
ಡಿ.13 ರಂದು ಮೋದಿ ಕಾಶಿ ಪ್ರವಾಸದಲ್ಲಿದ್ದರು. ಆ ಸಮಯದಲ್ಲಿ ಮಹಿಳೆ ಅವರ ಭೇಟಿಗೆ ಬಂದಿದ್ದಾರೆ. ಪ್ರಧಾನಿಯವರನ್ನು ಕಂಡ ತಕ್ಷಣ ಅವರು ನಮಸ್ಕರಿಸಿದ್ದಾರೆ. ಆದರೆ ಮೋದಿ ಅವರನ್ನು ತಡೆದು ತಾವೇ ಬಗ್ಗೆ ನಮಸ್ಕಾರ ಮಾಡಿದ್ದಾರೆ. ನಂತರ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.
ಶಿಖಾ ಜತೆಗೆ ಬಂದಿದ್ದ ಅವರ ಸಹೋದರ ವಿಶಾಲ್ ರಸ್ತೋಗಿ ಈ ಅಚಾನಕ್ ಬೆಳವಣಿಗೆಯಿಂದ ಅಚ್ಚರಿಗೊಂಡಿದ್ದಾರೆ. ಶಿಖಾ ಹುಟ್ಟಿನಿಂದಲೇ ಅಂಗವಿಕಲಳು. ನನ್ನ ಸಹೋದರಿಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ. ಮನೆಯಲ್ಲಿ ಅಂಗವಿಕಲರು ಇದ್ದರೆ ಅವರನ್ನೂ ನಿಮ್ಮಂತೆಯೇ ನೋಡಿ, ಅವರನ್ನು ಕಡೆಗಣಿಸಬೇಡಿ. ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂದು ಖುದ್ದು ಪ್ರಧಾನಿಯವರೇ ತೋರಿಸಿಕೊಟ್ಟಿದ್ದಾರೆ ಎಂದು ಭಾವುಕರಾದರು.
ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಈ ಚಿತ್ರವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾರೆ. ಇದು ಎಲ್ಲಾ ಮಹಿಳಾ ಶಕ್ತಿಗೆ ದೊಡ್ಡ ಗೌರವವಾಗಿದೆ. ನಾವೆಲ್ಲರೂ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ಅವರು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…