Featured

ಅಂಚೆ ಸೇವಕರ ಪ್ರತಿಭಟನೆಗೆ ಕೇಂದ್ರದ ಸ್ಪಂದನೆ, ನಾಲ್ಕು ಪಟ್ಟು ಸಂಬಳ ಏರಿಸಿದ ಮೋದಿ ಸರ್ಕಾರ..

ಕಳೆದ ಹಲವಾರು ದಿನಗಳಿಂದ ಅಂಚೆ ಡಾಕ್ ಸೇವಕರು ನಡೆಸುತ್ತಿದ್ದ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ‌. ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣ ಅಂಚೆ ಸೇವಕರು ಕಳೆ ಹಲವಾರು ದಿನಗಳಿಂದ ರಾಷ್ಟ್ರಾದ್ಯಂತ ಪ್ರತಿಭಟಿಸುತ್ತಿದ್ದರು. ಪ್ರತಿಭಟನೆಗೆ ಸ್ಪಂದಿಸಿರುವ ಮೋದಿ ಸರ್ಕಾರ ಮೂಲ ವೇತನವನ್ನು ಭರ್ಜರಿ ಪ್ರಮಾಣದಲ್ಲಿ ಏರಿಸಿದೆ. ವೇತನ ಏರಿಕೆ ಜೊತೆ ಅಂಚೆ ಸೇವಕರ ಹಲವಾರು ಬೇಡಿಕೆಗಳಿಗೂ ಕೇಂದ್ರ ಸಂಪುಟ ಸಭೆ ಅಸ್ತು ಎಂದಿದೆ.

ನಿನ್ನೇ ನಡೆದಂತಹ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮೀಣ ಅಂಚೆ ಸೇವಕರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ನಿರ್ಧಾರದ ಅನ್ವಯ ಗ್ರಾಮೀಣ ಡಾಕ್ ಸೇವಕರ ವೇತನ ನಾಲ್ಕು ಪಟ್ಟು ಹೆಚ್ಚಳವಾದಂತಾಗಿದೆ. ಇದುವರೆಗೆ ಮಾಸಿಕ 2,295 ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು ಮುಂದೆ ಹತ್ತು ಸಾವಿರ ರುಪಾಯಿ ನೀಡಲಾಗುವುದು. ಹಾಗೆಯೇ ಮಾಸಿಕ 2,775 ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು ಮುಂದೆ 12,500 ರೂಪಾಯಿ ವೇತನ ಸಿಗಲಿದೆ. ಜೊತೆಗೆ 4,115 ಮಾಸಿಕ ರೂಪಾಯಿ ವೇತನ ಪಡೆಯುತ್ತಿದ್ದವರಿಗೆ ಇನ್ನು 14,500 ರಷ್ಟು ವೇತನ ಸಿಗಲಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಷ್ಟ್ರಾದ್ಯಂತ ಇರುವ ಸುಮಾರು ಮೂರು ಲಕ್ಷ ಜನ ಗ್ರಾಮೀಣ ಅಂಚೆ ಸೇವಕರಿಗೆ ಉಪಯೋಗವಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದಂತೆ ಪ್ರತಿಯೊಬ್ಬ ಸೇವಕನಿಗೂ ಸುಮಾರು ಒಂದೂವರೆ ಲಕ್ಷ ರೂಪಾಯಿಯಷ್ಟು ಹಿಂಬಾಕಿ ಹಣ ಕೂಡ ಸಿಗಲಿದೆ. ಸರ್ಕಾರದ ಬೊಕ್ಕಸಕ್ಕೆ ಈ ನಿರ್ಧಾರದಿಂದ ಎರಡೂವರೆ ಸಾವಿರ ಕೋಟಿಯಷ್ಟು ಹೊರೆ ಬೀಳಲಿದೆ. ಕೇವಲ ವೇತನ ಹೆಚ್ಚಳ ಅಷ್ಟೇ ಅಲ್ಲದೆ ವೇತನದ ಜೊತೆಗೆ ಅಪಾಯ ಮತ್ತು ಶ್ರಮ ಭತ್ಯೆ, ಮೂರು ಪಾಳಿಯ ಬದಲಾಗಿ ಎರಡು ಪಾಳಿ ಕೆಲಸ ಸೇರಿದಂತೆ ಹಲವು ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಈ ಮೂಲಕ ಮೋದಿ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿದ್ದು ದೇಶಾದ್ಯಂತ ಲಕ್ಷಾಂತರ ಅಂಚೆ ಸೇವಕರು ಸಂಭ್ರಮಾಚರಣೆಯಲ್ಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago