ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್. ಆಶೋಕ್ – Vishwanews24
ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್. ಆಶೋಕ್
ಬೆಂಗಳೂರು : ಬೆಂಗಳೂರು & ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತ್ಯೇಕ ಆಸ್ಪತ್ರೆ ಕಲ್ಪಿಸಲಾಗುತ್ತದೆ ಎಂದು ಸಚಿವ ಆರ್ ಆಶೋಕ್ ಸ್ಪಷ್ಟನೆ ನೀಡಲಾಗಿದೆ.
ಕೋವಿಡ್ ಪರಿಶೀಲನಾ ಸಭೆಯ ನಂತ್ರ ಮಾಧ್ಯಮಳೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ಬೆಂಗಳುರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು. ಇನ್ನು ಕೊರೊನಾ ಸೋಂಕಿಗೆ ಆರಂಭದಲ್ಲೇ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜತೆಗೆ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಏರ್ಪೋರ್ಟ್ಗಳಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ತಪಾಸನೆ ಜತೆಗೆ ಆರ್ಟಿಪಿಸಿಆರ್ ಟೆಸ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು & ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತ್ಯೇಕ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ .
