ಬೆಂಗಳೂರು: ಅಂತರ್ಜಾತಿ ವಿವಾಹವಾದವರಿಗೆ 2.50 ರಿಂದ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ಪ್ರಸನ್ನಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರೋತ್ಸಾಹ ಧನ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೆಲವರಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಗೊತ್ತಾಗದಿದ್ದರೆ ಪ್ರೋತ್ಸಾಹ ಧನ ನೀಡುವುದು ವಿಳಂಬವಾಗಿದೆ ಎಂದು ಹೇಳಿದರು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಬರದಿದ್ದರೆ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಅವರಿಗೆ ಪ್ರೋತ್ಸಾಹ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎಸ್ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೂರು ತಿಂಗಳಿಗೊಮ್ಮೆ ಕುಂದುಕೊರತೆ ಸಭೆ ನಡೆಸಿ ಅವರ ಮೇಲೆ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ತಾವು ಸಮಾಜ ಕಲ್ಯಾಣ ಸಚಿವರಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸುದೀರ್ಘವಾಗಿ ಕುಂದುಕೊರತೆ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಎಸ್‍ಸಿಎಸ್‍ಪಿ-ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾದ ಹಣ ಆ ವರ್ಷದಲ್ಲಿ ಬಳಕೆಯಾಗದಿದ್ದರೆ ಅದು ಮುಂದಿನ ವರ್ಷಕ್ಕೆ ವರ್ಗಾವಣೆಯಾಗಲಿದೆ. ಹೀಗಾಗಿ ಅನುದಾನ ಬಳಕೆಯಾಗಿಲ್ಲ ಎನ್ನುವ ಆತಂಕ ಬೇಡ ಎಂದು ಅವರು ತಿಳಿಸಿದರು.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…