ದಕ್ಷಿಣ ಕನ್ನಡ

ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ .

ಕೊಲೆಯತ್ನ ಜಾನುವಾರು ಕಳ್ಳತನ ಮುಂತಾದ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದ ,ಸುಮಾರು 10 ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ತಾಲೂಕು ಪುದು ಗ್ರಾಮದ ಅಮ್ಮೆಮಾರ್ ಇಮ್ರಾನ್ @ಕುಟ್ಟ (24), ತಂದೆ:ದಿ/ ಅಬೂಬಕ್ಕರ್ ಎಂಬಾತನನ್ನು ದನ ಕಳವು ಮಾಡಲು ಉಪಯೋಗಿಸಿದ ಮಾರುತಿ ಓಮ್ನಿ ಕೆ 19 ಎಂಸಿ 6252 ಸಮೇತ ಈ ದಿನ ಖಚಿತ ವರ್ತಮಾನದ ಮೇರೆಗೆ ಆರ್ಕುಳ ಗೇಟ್ ಬಳಿ ಮಂಗಳೂರು ದಕ್ಷಿಣ ಎ.ಸಿ.ಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
25 ಪ್ರಕರಣ ವಿವರ: ಆರೋಪಿ ಇಮ್ರಾನ್ ಮೇಲೆ ಸುಮಾರು 25 ಜಾನುವಾರು ಕಳ್ಳತನ ಪ್ರಕರಣಗಳು ನಗರದ ವಿವಿಧ ಠಾಣೆಗಳಲ್ಲಿ ಮತ್ತು ಕೊಡಗು ಜಿಲ್ಲೆಯಲ್ಲಿ ದಾಖಲಾಗಿರುತ್ತದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ 3 ಜಾನುವಾರು ಕಳ್ಳತನ ಪ್ರಕರಣ , ಬಜ್ಪೆ ಠಾಣೆಯಲ್ಲಿ ಒಂದು ಜಾನುವಾರು ಕಳ್ಳತನ ಪ್ರಕರಣ , ಕೊಣಾಜೆ ಠಾಣಾ ಸರಹದ್ದಿನಲ್ಲಿ 3 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು, ಬಂಟ್ವಾಳ ಠಾಣಾ ಸರಹದ್ದಿನಲ್ಲಿ 8 ಪ್ರಕರಣದಲ್ಲಿ ದಾಖಲಾಗಿರುತ್ತದೆ. 2017 ರಲ್ಲಿ ಕೊಡಗು ಜಿಲ್ಲೆಯಲ್ಲಿ ಈತನ ವಿರುದ್ದ 7 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಇದರಲ್ಲಿ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಜಾನುವಾರು ಕಳ್ಳತನ ಸಮಯ 2 ಕೊಲೆಯತ್ನ ಪ್ರಕರಣ ಮತ್ತು ಒಂದು ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ 3 ಜಾನುವಾರು ಕಳ್ಳತನ ಪ್ರಕರಣ ಮತ್ತು ಸೋಮವಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಜಾನುವಾರು ಕಳ್ಳತನ ಪ್ರಕರಣವು ದಾಖಲಾಗಿರುತ್ತದೆ.ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಈತನ ವಿರುದ್ದ 2 ಪ್ರಕರಣ ದಾಖಲಾಗಿರುತ್ತದೆ. ಲಾರಿ ಚಾಲಕನ ಕೊಲೆ ಮತ್ತು ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಈ ಮೇಲಿನ ಪ್ರಕರಣಗಳಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ 3 ಜಾನುವಾರು ಕಳ್ಳತನ ಪ್ರಕರಣ ಮತ್ತು ಕೊಡಗು ಜಿಲ್ಲೆಯ 7 ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದನು .ಸುಮಾರು ಒಂದು ತಿಂಗಳ ಹಿಂದೆ ಈತನ ಸಹಚರನಾದ ನಿಝಾಮ್ ಎಂಬಾತನನ್ನು ರೌಡಿ ನಿಗ್ರಹ ದಳದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ
ಈ ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಟಿ.ಆರ್ ಸುರೇಶ್ ಐಪಿಎಸ್ ರವರ ಆದೇಶದಂತೆ ಮಾನ್ಯ ಡಿಸಿಪಿಯವರಾದ ಹನುಮಂತರಾಯ.ಐಪಿಎಸ್ ಮತ್ತು ಶ್ರೀಮತಿ.ಉಮಾ ಪ್ರಶಾಂತರವರ ನಿರ್ದೇಶನದಂತೆ, ದಕ್ಷಿಣ ರೌಡಿ ನಿಗ್ರಹದಳದ ಎಸಿಪಿ ರಾಮರಾವ್ ಮತ್ತು ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಹಾಗು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago