ಬೆಂಗಳೂರು:“ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ, ಇಂತಹ 10 ಸಿಡಿಗಳು ಬಂದರೂ ಎದುರಿಸಲು ಸಿದ್ಧನಿದ್ದೇನೆ ಇನ್ನು ನಮ್ಮ ಆಟ ಪ್ರಾರಂಭವಾಗಲಿದ್ದು, ಇದರ ಹಿಂದಿನ ಮಹಾನಾಯಕ ಯಾರೆಂದು ಶೀಘ್ರದಲ್ಲೇ ಬಹಿರಂಗವಾಗಲಿದೆ” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿಯಲ್ಲಿರುವ ಯುವತಿ ನೀಡಿದ ಲಿಖಿತ ದೂರಿಗೆ ಪ್ರತಿಕ್ರಿಯಿಸಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನನ್ನ ವಿರುದ್ದ ಅವರು ಕೊನೆಯ ಅಸ್ತ್ರವನ್ನು ಬಿಟ್ಟಿದ್ದಾರೆ. ಇದಕ್ಕೆಲ್ಲ ಅಂಜುವ ವ್ಯಕ್ತಿ ನಾನಲ್ಲ. ನಾನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವೆ. ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ, ಇದ್ಯಾವ ಲೆಕ್ಕ” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24
“ನನ್ನ ಮೇಲೆ ಆಕೆ ಅತ್ಯಾಚಾರದ ದೂರುದಾಖಲಿಸಿದರೂ ನಾನು ಇದನ್ನು ಎದುರಿಸಲು ಶಕ್ತನಾಗಿದ್ದೇನೆ. ಈ ವಿಚಾರದಲ್ಲಿ ಮಾನಸಿಕವಾಗಿ ಸಿದ್ದನಾಗಿದ್ದೇನೆ. ಕಾನೂನು ಹೋರಾಟ ನಡೆಸುತ್ತೇನೆ. ನಾನು ಈ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ. ಏನಾಗುತ್ತೋ ನೋಡೋಣ” ಎಂದಿದ್ದಾರೆ
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಪ್ರಕರಣ ಸಂಬಂಧ ಮೊದಲಾಗಿ ನಾನು ದೂರು ನೀಡಿದ್ದೇನೆ. ನನ್ನ ದೂರಿನ ಬಗ್ಗೆ ಏನಾಗಿದೆ ಎಂದು ಪೊಲೀಸ್ ಆಯುಕ್ತರನ್ನು ಕೇಳುತ್ತೇನೆ. ಮೊದಲು ನನ್ನ ಎಫ್‌ಐಆರ್ ಬಗ್ಗೆ ತನಿಖೆಯಾಗಬೇಕು. ನನ್ನ ವಿರುದ್ಧದ ಷಡ್ಯಂತ್ರದ ಬಗ್ಗೆ ಗೃಹ ಸಚಿವರಿಗೆ ಹೇಳಿದ್ದೇನೆ. ನನಗೂ ಕಾನೂನು ಗೊತ್ತಿದೆ, ವಕೀಲರು ಇದ್ದಾರೆ ಎಂದೂ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…