Featured

ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇನೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24

ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು:“ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ, ಇಂತಹ 10 ಸಿಡಿಗಳು ಬಂದರೂ ಎದುರಿಸಲು ಸಿದ್ಧನಿದ್ದೇನೆ ಇನ್ನು ನಮ್ಮ ಆಟ ಪ್ರಾರಂಭವಾಗಲಿದ್ದು, ಇದರ ಹಿಂದಿನ ಮಹಾನಾಯಕ ಯಾರೆಂದು ಶೀಘ್ರದಲ್ಲೇ ಬಹಿರಂಗವಾಗಲಿದೆ” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಡಿಯಲ್ಲಿರುವ ಯುವತಿ ನೀಡಿದ ಲಿಖಿತ ದೂರಿಗೆ ಪ್ರತಿಕ್ರಿಯಿಸಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನನ್ನ ವಿರುದ್ದ ಅವರು ಕೊನೆಯ ಅಸ್ತ್ರವನ್ನು ಬಿಟ್ಟಿದ್ದಾರೆ. ಇದಕ್ಕೆಲ್ಲ ಅಂಜುವ ವ್ಯಕ್ತಿ ನಾನಲ್ಲ. ನಾನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವೆ. ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ, ಇದ್ಯಾವ ಲೆಕ್ಕ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24

“ನನ್ನ ಮೇಲೆ ಆಕೆ ಅತ್ಯಾಚಾರದ ದೂರುದಾಖಲಿಸಿದರೂ ನಾನು ಇದನ್ನು ಎದುರಿಸಲು ಶಕ್ತನಾಗಿದ್ದೇನೆ. ಈ ವಿಚಾರದಲ್ಲಿ ಮಾನಸಿಕವಾಗಿ ಸಿದ್ದನಾಗಿದ್ದೇನೆ. ಕಾನೂನು ಹೋರಾಟ ನಡೆಸುತ್ತೇನೆ. ನಾನು ಈ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ. ಏನಾಗುತ್ತೋ ನೋಡೋಣ” ಎಂದಿದ್ದಾರೆ

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಪ್ರಕರಣ ಸಂಬಂಧ ಮೊದಲಾಗಿ ನಾನು ದೂರು ನೀಡಿದ್ದೇನೆ. ನನ್ನ ದೂರಿನ ಬಗ್ಗೆ ಏನಾಗಿದೆ ಎಂದು ಪೊಲೀಸ್ ಆಯುಕ್ತರನ್ನು ಕೇಳುತ್ತೇನೆ. ಮೊದಲು ನನ್ನ ಎಫ್‌ಐಆರ್ ಬಗ್ಗೆ ತನಿಖೆಯಾಗಬೇಕು. ನನ್ನ ವಿರುದ್ಧದ ಷಡ್ಯಂತ್ರದ ಬಗ್ಗೆ ಗೃಹ ಸಚಿವರಿಗೆ ಹೇಳಿದ್ದೇನೆ. ನನಗೂ ಕಾನೂನು ಗೊತ್ತಿದೆ, ವಕೀಲರು ಇದ್ದಾರೆ ಎಂದೂ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

1 hour ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

1 hour ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago