ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್ – Vishwanews24
ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್
ನವದೆಹಲಿ: ಭಾರತ ವನಿತಾ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮಾದರಿಗಳಿಗೆ ಬುಧವಾರ (ಜೂನ್ 8) ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಮಿಥಾಲಿ, ‘ಇಂದು ನಾನು ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವ ದಿನ’ ಎಂದು ಬರೆದಿದ್ದಾರೆ.
39 ರ ಹರೆಯದ ಭಾರತೀಯ ಟೆಸ್ಟ್ ಮತ್ತು ಏಕದಿನ ತಂಡದ ನಾಯಕಿ ಮಿಥಾಲಿ 1999 ರಲ್ಲಿ ಪಾದಾರ್ಪಣೆ ಮಾಡಿದ್ದರು. 23 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಅಂತಾಷ್ಟ್ರೀಯ ವೃತ್ತಿಜೀವನದಲ್ಲಿ 232 ಏಕದಿನ , 89 ಟಿ 20 ಮತ್ತು 12 ಟೆಸ್ಟ್ಗಳಲ್ಲಿ ಆಡಿದ್ದಾರೆ.

ಇಷ್ಟು ವರ್ಷ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್ಗಾಗಿ ಎದುರು ನೋಡುತ್ತಿದ್ದೇನೆ . ಭಾರತ ತಂಡವು ಕೆಲವು ಪ್ರತಿಭಾವಂತ ಯುವ ಆಟಗಾರರ ಸಮರ್ಥ ಕೈಯಲ್ಲಿದೆ ಮತ್ತು ಭಾರತೀಯ ಕ್ರಿಕೆಟ್ನ ಭವಿಷ್ಯವು ಉಜ್ವಲವಾಗಿದೆ. ನನ್ನ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ.ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.
Thank you for all your love & support over the years!
I look forward to my 2nd innings with your blessing and support. pic.twitter.com/OkPUICcU4u— Mithali Raj (@M_Raj03) June 8, 2022
ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಏಕದಿನ ಪಂದ್ಯಗಳಲ್ಲಿ 7 ಶತಕಗಳು ಮತ್ತು 64 ಅರ್ಧಶತಕಗಳೊಂದಿಗೆ 7805 ರನ್ಗಳನ್ನು,ಟಿ 20 ಯಲ್ಲಿ 17 ಅರ್ಧಶತಕಗಳೊಂದಿಗೆ 2,364 ರನ್ಗಳು ಮತ್ತು ಟೆಸ್ಟ್ ನಲ್ಲಿ 699 ರನ್ಗಳನ್ನು ಗಳಿಸಿದ್ದಾರೆ.
ಪುತ್ರನಿಗೆ ‘ಅವ್ಯಾನ್ ದೇವ್’ಎಂದು ನಾಮಕರಣ ಮಾಡಿದ ನಿಖಿಲ್ ಕುಮಾರ್ ಸ್ವಾಮಿ – Vishwanews24
