ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಸಲ್ಲಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ -Vishwanews24
ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್, ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿಯನ್ನು ಸಲ್ಲಿಸಿದ್ದಾರೆ.
ಭಾರತೀಯ ಮಹಿಳಾ ಟ್ವೆಂಟಿ-20 ಕ್ರಿಕೆಟ್ ತಂಡದ ಮಾಜಿ ನಾಯಕಿಯೂ ಆಗಿರುವ ಮಿಥಾಲಿ 32 ಟ್ವೆಂಟಿ-20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಹಾಗೆಯೇ 2012ರ ಶ್ರೀಲಂಕಾ, 2014ರ ಬಾಂಗ್ಲಾದೇಶ ಹಾಗೂ 2016ರಲ್ಲಿ ಭಾರತದಲ್ಲಿ ನಡೆದ ವಿಶ್ವ ಟ್ವೆಂಟಿ-20 ಮಹಿಳಾ ವಿಶ್ವಕಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
ಇದು ಭಾರತೀಯ ಬ್ಯಾಟ್ಸ್ವುವೆನ್ರಿಂದ ದಾಖಲಾದ ಗರಿಷ್ಠ ಮೊತ್ತವಾಗಿದೆ. ಅಷ್ಟೇ ಯಾಕೆ ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 2000 ರನ್ ಗಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೂ ಪಾತ್ರವಾಗಿದ್ದರು.
ಒಟ್ಟು 88 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ ರಾಜ್ 2364 ರನ್ ಗಳಿಸಿದ್ದಾರೆ. ಇದು ಭಾರತೀಯ ಮಹಿಳಾ ಆಟಗಾರ್ತಿ ದಾಖಲಿಸಿದ ಗರಿಷ್ಠ ಮೊತ್ತವಾಗಿದೆ.
BREAKING: @M_Raj03 announces retirement from T20Is
She led India in 32 T20Is including the three Women’s WT20 World Cups in 2012 (Sri Lanka), 2014 (Bangladesh) and 2016 (India).
More details here – https://t.co/Yuv1CaCXFv pic.twitter.com/Y6n5irOoME
— BCCI Women (@BCCIWomen) September 3, 2019
