ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್

ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಳೆಪ ಫಾರ್ಮ್​ನಿಂದ ಬಳಲುತ್ತಿದ್ದ ವಿಲಿಯಮ್ಸನ್ ತಮ್ಮ 35 ನೇ ವಯಸ್ಸಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆಟದ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ.

ಕಳೆದ ವರ್ಷ ಅಂದರೆ 2025 ರಲ್ಲಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದ ಕೇನ್, ಬಹಳ ಸಮಯದಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇದೀಗ ತಮ್ಮ 16 ವರ್ಷಗಳ ವೃತ್ತಿಜೀವನಕ್ಕೆ ಪೂರ್ಣವಿರಾಮವನ್ನಿಟ್ಟಿರುವ ವಿಲಿಯಮ್ಸನ್ ನ್ಯೂಜಿಲೆಂಡ್ ತಂಡದ ಪರ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಕಿವೀಸ್ ಪರ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರನೆನಿಸಿಕೊಂಡಿರುವ ಕೇನ್, ಇದುವರೆಗೆ ಆಡಿರುವ 378 ಪಂದ್ಯಗಳಲ್ಲಿ 19,346 ರನ್ ಗಳಿಸಿದ್ದಾರೆ. ಇದರಲ್ಲಿ 48 ಶತಕಗಳು ಸೇರಿವೆ. ಆಟಗಾರನಾಗಿ ಮಾತ್ರವಲ್ಲದೆ ನಾಯಕನಾಗಿಯೂ ತಂಡವನ್ನು ಮುನ್ನಡೆಸಿರುವ ವಿಲಿಯಮ್ಸನ್, ತಮ್ಮ ನಾಯಕತ್ವದಲ್ಲಿ ತಂಡವನ್ನು ಎರಡು ಐಸಿಸಿ ಪಂದ್ಯಾವಳಿಗಳ ಫೈನಲ್‌ಗೆ ಕೊಂಡೊಯ್ದಿದ್ದರು. ಅದರಲ್ಲಿ ಒಮ್ಮೆ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು.

ಟೆಸ್ಟ್ ಸರಣಿ ನಡುವೆ ನಿವೃತ್ತಿ ಘೋಷಣೆ
ವಾಸ್ತವವಾಗಿ ಕೇನ್ ವಿಲಿಯಮ್ಸನ್ ತಂಡದೊಂದಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದಲ್ಲಿ ಉಭಯ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲನೇ ಪಂದ್ಯ ಈಗಾಗಲೇ ಮುಗಿದಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹೀನಾಯ ಸೋಲು ಕಂಡಿತ್ತು. ಅನುಭವಿ ವಿಲಿಯಮ್ಸನ್ ಎರಡೂ ಇನ್ನಿಂಗ್ಸ್​ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿದ್ದ ಕೇನ್, ಎರಡನೇ ಇನ್ನಿಂಗ್ಸ್​ನಲ್ಲಿ 18 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ನಿವೃತ್ತಿ ಘೋಷಿಸಿರುವ ವಿಲಿಯಮ್ಸನ್ ಇನ್ನು ಮುಂದೆ ತಂಡದ ಭಾಗವಾಗಿರುವುದಿಲ್ಲ. ಹೀಗಾಗಿ ಅವರ ಬದಲಿಯಾಗಿ ತಂಡಕ್ಕೆ ಬದಲಿ ಆಟಗಾರನ ಆಯ್ಕೆಯಾಗಬೇಕಿದೆ.

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

Leave a Reply