Featured

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ರಾರಾಜಿಸಿದ ಕನ್ನಡದ ಕಾಂತಾರ – Vishwanews24

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ರಾರಾಜಿಸಿದ ಕನ್ನಡದ ಕಾಂತಾರ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ಕನ್ನಡದ ಸೂಪರ್‍ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್‍ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ.

1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್‍ಲೈನ್ ಮ್ಯಾಗಜಿನ್‍ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷ. ಕಾಂತಾರ ಸಿನಿಮಾ ಈವರೆಗೂ ಅಂದಾಜು 350 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕವೊಂದರಲ್ಲಿ ಅದು 150 ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಇನ್ನೇನು ಸದ್ಯದಲ್ಲೇ ಬಾಲಿವುಡ್ ನಲ್ಲೂ 100 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಿವೆ ಮಾಹಿತಿಗಳು.

ಕನ್ನಡ, ಹಿಂದಿ, ತಮಿಳು ಹಾಗೂ ತೆಲುಗಿನ ನಂತರ ಮಲಯಾಳಂನಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಗಳಿಕೆ ಮಾಡಿದೆ. ಈವರೆಗೂ ಕೆಜಿಎಫ್ 1 ಸಿನಿಮಾ ಮಾಡಿದ ಗಳಿಕೆಗಿಂತಲೂ ಕಾಂತರ ಕಲೆಕ್ಷನ್ ಹೆಚ್ಚು ಎನ್ನುವುದು ಅಲ್ಲಿನ ಮಾಹಿತಿ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪೃಥ್ವಿರಾಜ್ ಸುಕುಮಾರನ್ ವಿತರಣೆ ಮಾಡಿದ್ದು, ಅಂದಾಜು 20 ಕೋಟಿ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.

ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24

ಕಾಂತಾರ ಸಿನಿಮಾದ ಒಟ್ಟು ಬಜೆಟ್ ಕೇರಳವೊಂದರಲ್ಲೇ ವಾಪಸ್ಸಾಗಿ, ಮೂರ್ನಾಲ್ಕು ಕೋಟಿ ರೂಪಾಯಿ ಲಾಭ ತಂದಿದೆ ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಇನ್ನೂ ಈ ಸಿನಿಮಾ ತುಂಬಿದ ಗೃಹದಲ್ಲಿ ಪ್ರದರ್ಶನ ಕಾಣುತ್ತಿರುವುದರಿಂದ ಮತ್ತಷ್ಟು ದುಡ್ಡು ಹರಿದು ಬರಲಿದೆ. ತೆಲುಗಿನಲ್ಲೂ ಈ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಅಲ್ಲಿಯೂ 40 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆಯಂತೆ. ಅಲ್ಲು ಅರ್ಜುನ್ ತಂದೆ ಈ ಸಿನಿಮಾವನ್ನು ತೆಲುಗಿನಲ್ಲಿ ವಿತರಿಸಿದ್ದು, ಭಾರೀ ಲಾಭವನ್ನೇ ಮಾಡಿಕೊಂಡಿದ್ದಾರಂತೆ.

ಕನ್ನಡ ಸಿನಿಮಾವೊಂದರು ದೇಶದ ಬಹುತೇಕ ಭಾಷೆಗಳಲ್ಲಿ ಯಶಸ್ಸು ಕಂಡಿದ್ದು ತೀರಾ ಕಡಿಮೆ. ಇತ್ತೀಚಿನ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಚೆನ್ನಾಗಿಯೇ ದುಡ್ಡು ಮಾಡಿತ್ತು. ನಂತರದ ಸ್ಥಾನ ಕಾಂತಾರ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿಗೂ ನ್ಯಾಷನಲ್ ಸ್ಟಾರ್ ಪಟ್ಟ ತಂದು ಕೊಟ್ಟಿದೆ.

ಕಿನ್ನಿಗೋಳಿ : ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್‌ ಕಳವು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago