ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೆಮ್ಮಿದ ಮಗು- vishwanews24

Featured, ರಾಜ್ಯ ನ್ಯೂಸ್

ಬಾಗಲಕೋಟೆ : ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೆಮ್ಮಿದ ಮಗು – ಇಳಕಲ್ ನಗರದಲ್ಲಿ ಅಚ್ಚರಿ ಘಟನೆ

ಇಳಕಲ್ : ಬಾಗಲಕೋಟೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಸತ್ತಿದೆ ಎಂದು ತಿಳಿದುಕೊಂಡಿದ್ದ ಕಂದಮ್ಮ ಕೆಮ್ಮಿದ್ದು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ.

ಬಾಗಲಕೋಟೆ ‌ ಜಿಲ್ಲೆಯ ಇಳಕಲ್​ನಲ್ಲಿ ಈ ಘಟನೆ ನಡೆದಿದ್ದು ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ್ದಾನೆ.

ಕಾಪು: ಬ್ಯಾಂಕ್‌ ಹೆಸರಿನಲ್ಲಿ ನಕಲಿ ವಾಟ್ಸಾಪ್‌ ಲಿಂಕ್‌ ;  ಖಾತೆಯಿಂದ 82,200 ರೂ. ವಂಚನೆ – vishwanews24

13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ಮಗುವನ್ನು ಪೋಷಕರು ಆಸ್ಪತ್ರೆಯಿಂದ ವಾಪಸ್ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು.

ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಸಂಬಂಧಿಕರೆಲ್ಲ ಮನೆಗೆ ಆಗಮಿಸಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿತ್ತು. ಅಷ್ಟರಲ್ಲಿ ಮಗು ಕೆಮ್ಮಿದೆ.ಈ ವೇಳೆ ಮಗು ಬದುಕಿದೆ ಎಂದು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಪೋಷಕರು ಹಾಗೂ ಸಂಬಂಧಿಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಪರಿಷತ್ ಚುನಾವಣೆ: ಮತದಾರರಿಗೆ ಮನವೊಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಿ : ಜೆಪಿ ಹೆಗ್ಡೆ – vishwanews24

Leave a Reply