ಅಸ್ಸಾಂ: ಅನಾರೋಗ್ಯದಿಂದ ಮೃತಪಟ್ಟ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟುವ ಮೂಲಕ ಯುವಕನೊಬ್ಬ ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ ಮಾಡಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಮೊಯಿರ್‌ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮತ್ತು ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಕುಟುಂಬದ ಒಪ್ಪಿಗೆ ಪಡೆದು ಮದುವೆಗೂ ನಿರ್ಧರಿಸಿದ್ದರು. ಆದರೆ ಪ್ರಾರ್ಥನಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಾರ್ಥನಾ ಶುಕ್ರವಾರ ಸಂಜೆ ಸಾವನ್ನಪ್ಪಿದ್ದರು.
🌐 ಬೊಮ್ಮಾಯಿ ಮತ್ತೆ ಜೆಡಿಎಸ್‌ಗೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ ..
ಇನ್ನು ಪ್ರೇಯಸಿನ ಸಾವಿನ ಸುದ್ದಿ ತಿಳಿದ ಬಿಟುಪಾನ್ ದುಃಖ ತಡೆಯಲಾರದೇ ಆಕೆಯ ಮನೆಗೆ ಬಂದಿದ್ದು, ಮೃತದೇಹಕ್ಕೆ ತಾಳಿ ಕಟ್ಟಿದ್ದಾರೆ. ಅಲ್ಲದೆ ಆಕೆಯನ್ನು ಹೊರತುಪಡಿಸಿ ಇನ್ಯಾರನ್ನೂ ಮದುವೆಯಾಗುವುದಿಲ್ಲ ಎಂದು ವಾಗ್ದಾನ ಮಾಡಿದ್ದರೆ ಎಂದು ಮೃತಳ ಸಂಬಂಧಿ ಸುಭೋನ್ ಬೋರಾ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರೇಯಸಿಯ ಮೃತದೇಹಕ್ಕೆ ಹಾರ ಹಾಕಿದ ಬಿಟುಪಾನ್ ಬಳಿಕ ಆಕೆಯ ದೇಹಕ್ಕೆ ಇನ್ನೊಂದು ಹಾರ ಮುಟ್ಟಿಸಿ ತಾನೆ ಹಾಕಿಕೊಂಡಿದ್ದಾರೆ. ಆನಂತರ ಆಕೆಯ ಹಣೆ ಮತ್ತು ಕೆನ್ನೆ ಮೇಲೆ ಸಿಂಧೂರ ಹಚ್ಚಿ ತಾಳಿಯನ್ನೂ ಕಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…