ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನ ರೀ ರಿಲೀಸ್ ಮಾಡಲಾಗ್ತಿದೆ. ಮಂಡ್ಯ, ಬೆಂಗಳೂರು, ಮೈಸೂರು, ಅಮೇರಿಕಾ ಸೇರಿದಂತೆ ಹಲವೆಡೆ ಸಿನಿಮಾ ಮತ್ತೊಮ್ಮೆ ರಿಲೀಸ್ ಆಗ್ತಿದೆ.
ಚಿತ್ರ ಪ್ರದರ್ಶನದಿಂದ ಬಂದ ಹಣವನ್ನು ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವು ನೀಡಲು ಚಿತ್ರತಂಡ ನಿರ್ಧರಿಸಿದೆ.
ನವೆಂಬರ್ 24ರಂದು ಮಂಡ್ಯ ಬಸ್ ಅಪಘಾತದ ಸುದ್ದಿ ಕೇಳಿ ಅಂಬಿ ಕುಟುಂಬ ಕಂಬನಿ ಮಿಡಿದಿತ್ತು. ಅದೇ ದಿನ ರಾತ್ರಿ ಅಂಬಿ ಕೊನೆಯುಸಿರೆಳೆದರು. ಹೀಗಾಗಿ ಸಿನಿಮಾ ರೀ ರಿಲೀಸ್ನ ಎಲ್ಲಾ ಲಾಭವನ್ನು ಅಪಘಾತ ಸಂತ್ರಸ್ತರ ಕುಟುಂಬಕ್ಕೆ ನೀಡಲಾಗ್ತಿದೆ.
ಅಂಬರೀಶ್ ತಮ್ಮ ಸಿನಿಮಾ ಕೆರಿಯರ್ನಲ್ಲಿ, ಇಷ್ಟಪಟ್ಟ ಸಿನಿಮಾಗಳಲ್ಲಿ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಕೂಡ ಒಂದು.
ಇಂದು ಮಂಡ್ಯದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಹಾಗೇ ನಾಳೆ ಯಲಹಂಕ ಸೇರಿದಂತೆ ಬೆಂಗಳೂರಿನ ಹಲವು ಕಡೆ ರಿಲೀಸ್ ಆಗಲಿದೆ. ಈ ವೀಕೆಂಡ್ ನಲ್ಲಿ ಅಮೇರಿಕಾದ 8 ಸ್ಕ್ರೀನ್ ಗಳಲ್ಲಿ ಸಿನಿಮಾ ರೀ ರಿಲೀಸ್ ಆಗ್ತಿದೆ. ಈಗಾಗ್ಲೆ ಸಾಕಷ್ಟು ಥಿಯೇಟರ್ ಮಾಲೀಕರಿಂದ ಸಿನಿಮಾ ರಿಲೀಸ್ಗೆ ಬೇಡಿಕೆ ಬಂದಿದೆ. ನಾಳೆ ಸಂಜೆ ವೇಳೆಗೆ ಥಿಯೇಟರ್ ಲಿಸ್ಟ್ ಹೊರಬೀಳಲಿದೆ ಎಂದು ನಿರ್ಮಾಪಕ, ವಿತರಕ ಜಾಕ್ ಮಂಜು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…