Featured

ಅಂಬಿ ನಿಂಗ್​ ವಯಸ್ಸಾಯ್ತೋ ಸಿನಿಮಾ ರೀ ರಿಲೀಸ್​ ..

ಬೆಂಗಳೂರು: ರೆಬೆಲ್​ ಸ್ಟಾರ್​ ಅಂಬರೀಶ್​ ನಿಧನದ ಹಿನ್ನೆಲೆಯಲ್ಲಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನ ರೀ ರಿಲೀಸ್ ಮಾಡಲಾಗ್ತಿದೆ. ಮಂಡ್ಯ, ಬೆಂಗಳೂರು, ಮೈಸೂರು, ಅಮೇರಿಕಾ ಸೇರಿದಂತೆ ಹಲವೆಡೆ ಸಿನಿಮಾ ಮತ್ತೊಮ್ಮೆ ರಿಲೀಸ್ ಆಗ್ತಿದೆ.

ಚಿತ್ರ ಪ್ರದರ್ಶನದಿಂದ ಬಂದ ಹಣವನ್ನು ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವು ನೀಡಲು ಚಿತ್ರತಂಡ ನಿರ್ಧರಿಸಿದೆ.

ನವೆಂಬರ್​ 24ರಂದು ಮಂಡ್ಯ ಬಸ್ ಅಪಘಾತದ ಸುದ್ದಿ ಕೇಳಿ ಅಂಬಿ ಕುಟುಂಬ ಕಂಬನಿ ಮಿಡಿದಿತ್ತು. ಅದೇ ದಿನ ರಾತ್ರಿ ಅಂಬಿ ಕೊನೆಯುಸಿರೆಳೆದರು. ಹೀಗಾಗಿ ಸಿನಿಮಾ ರೀ ರಿಲೀಸ್​​ನ ಎಲ್ಲಾ ಲಾಭವನ್ನು ಅಪಘಾತ ಸಂತ್ರಸ್ತರ ಕುಟುಂಬಕ್ಕೆ ನೀಡಲಾಗ್ತಿದೆ.

ಅಂಬರೀಶ್ ತಮ್ಮ ಸಿನಿಮಾ ಕೆರಿಯರ್​​​ನಲ್ಲಿ, ಇಷ್ಟಪಟ್ಟ ಸಿನಿಮಾಗಳಲ್ಲಿ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಕೂಡ ಒಂದು.

ಇಂದು ಮಂಡ್ಯದಲ್ಲಿ  ಸಿನಿಮಾ ರಿಲೀಸ್ ಆಗ್ತಿದೆ. ಹಾಗೇ ನಾಳೆ ಯಲಹಂಕ ಸೇರಿದಂತೆ ಬೆಂಗಳೂರಿನ ಹಲವು ಕಡೆ ರಿಲೀಸ್ ಆಗಲಿದೆ. ಈ ವೀಕೆಂಡ್ ನಲ್ಲಿ ಅಮೇರಿಕಾದ 8 ಸ್ಕ್ರೀನ್ ಗಳಲ್ಲಿ ಸಿನಿಮಾ ರೀ ರಿಲೀಸ್​ ಆಗ್ತಿದೆ. ಈಗಾಗ್ಲೆ ಸಾಕಷ್ಟು ಥಿಯೇಟರ್ ಮಾಲೀಕರಿಂದ ಸಿನಿಮಾ ರಿಲೀಸ್​​ಗೆ ಬೇಡಿಕೆ ಬಂದಿದೆ. ನಾಳೆ ಸಂಜೆ ವೇಳೆಗೆ ಥಿಯೇಟರ್ ಲಿಸ್ಟ್ ಹೊರಬೀಳಲಿದೆ ಎಂದು ನಿರ್ಮಾಪಕ, ವಿತರಕ ಜಾಕ್ ಮಂಜು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

6 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

6 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

8 hours ago