ಚೆನ್ನೈ: ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ರೈತರೊಬ್ಬರು ತಮ್ಮ ಮೇಕೆಗಳಿಗೆ ತಿರುಗಾಡಿ ಮೇಯಿಸಲು ತೊಂದರೆ ಆಗಬಾರದು ಎಂದು ತಾತ್ಕಾಲಿಕ ರೈನ್‍ಕೋಟ್‍ಗಳನ್ನು ರಚಿಸಿದ್ದಾರೆ.
ತಮಿಳುನಾಡಿನ ತಂಜಾವೂರಿನ ಕುಲಮಂಗಲಂ ಗ್ರಾಮದ ಗಣೇಶನ್ (70) ಎಂಬವರಿಗೆ ಪ್ರಾಣಿಗಳೆಂದರೆ ಬಹಳ ಇಷ್ಟ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಜಮೀನಿನಲ್ಲಿ ಕುರಿಗಳು, ಹಸುಗಳು, ಕೋಳೀಗಳನ್ನು ಸಹ ಸಾಕುತ್ತಿದ್ದಾರೆ. ಅಕಾಲಿಕ ಮಳೆಯಿಂದಾಗಿ ತನ್ನ ಪ್ರಾಣಿಗಳಿಗೆ ತೊಂದರೆ ಆಗುತ್ತಿದೆ. ಹಾಗೂ ಮೇಕೆಗಳು ಮೇಯುವಾಗ ವಿಪರೀತ ಚಳಿಯಿಂದ ನಡುಗುತ್ತಿರುವುದನ್ನು ಅವರು ಗಮನಿಸಿದ್ದಾರೆ.
ಇದರಿಂದಾಗಿ ಅವುಗಳ ರಕ್ಷಣೆಗೆ ಏನಾದರೂ ಮಾಡಬೇಕು ಎಂದುಕೊಂಡ ಗಣೇಶನ್ ಅವುಗಳಿಗೆ ರೈನ್‍ಕೋಟ್‍ನ್ನು ನಿರ್ಮಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಕಿ ಮೂಟೆಗಳನ್ನು ತಂದ ಚೀಲವನ್ನು ಅವರು ತಮ್ಮ ಮೇಕೆಗಳಿಗೆಂದೇ ರೈನ್ ಕೋಟ್‍ಗಳನ್ನಾಗಿ ಪರಿವರ್ತಿಸಿದರು. ಇದನ್ನೂ ಓದಿ: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ – Vishwanews24
ಮೊದಲಿಗೆ ಅಲ್ಲಿನ ಗ್ರಾಮಸ್ಥರು ಗಣೇಶನ್ ಅವರ ಈ ಕೆಲಸದಿಂದ ಆಶ್ಚರ್ಯಕ್ಕೊಳಗಾದರೂ, ಆನಂತರದಲ್ಲಿ ಗಣೇಶನ್ ಅವರಿಗೆ ಮೇಕೆಗಳ ಮೇಲಿರುವ ಕಾಳಜಿಯ ಕುರಿತು ಶ್ಲಾಘಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…