Featured

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ

ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ ವಿಮಾನ ಸಂಚಾರ ಪುನರಾರಂಭಗೊಳ್ಳುವ ಸೂಚನೆ ಇದೆ.

ಚಳಿಗಾಲದ ವೇಳಾಪಟ್ಟಿಯಂತೆ ಅಕ್ಟೋಬರ್‌ ಕೊನೆ ವಾರ ಮಂಗಳೂರು-ಕುವೈಟ್‌ ಮಧ್ಯೆ ನೇರ ವಿಮಾನ ಆರಂಭಿಸುವುದಕ್ಕೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಮುಂದಾಗಿರುವುದಾಗಿ ತಿಳಿದುಬಂದಿದೆ.

ಲಭ್ಯ ಮಾಹಿತಿಯಂತೆ ಅ. 27ರಿಂದ ವಾರಕ್ಕೆ ಮೂರು ಬಾರಿ ಎಂದರೆ ಮಂಗಳವಾರ, ಶುಕ್ರವಾರ, ಶನಿವಾರ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು-ಕುವೈಟ್‌ ಮಧ್ಯೆ ಕಾರ್ಯಾಚರಿಸಲಿದೆ.

ಇರಾನ್‌-ಇಸ್ರೇಲ್‌, ಅಮೆರಿಕ ಯುದ್ದ ಆರಂಭಗೊಂಡ ಬಳಿಕ (ಫೆ. 28) ಗಲ್ಫ್ ರಾಷ್ಟ್ರಗಳ ವಿಮಾನ ಸಂಪರ್ಕ ಬಹುತೇಕ ಸ್ಥಗಿತಗೊಂಡಿತ್ತು. ಆದರೆ ಯುದ್ದದ ತೀವ್ರತೆ ಕಡಿಮೆಯಾಗುತ್ತಿದ್ದಂತೆ ಬಹುತೇಕ ರಾಷ್ಟ್ರಗಳಿಗೆ ವಿಮಾನಯಾನ ಪುನರಾರಂಭಗೊಂಡಿತ್ತು. ಆದರೆ ಕುವೈಟ್‌ ವಿಮಾನ ಮಾತ್ರ ಮತ್ತೆ ಯಾನ ಆರಂಭಿಸಿಲ್ಲ. ಯುದ್ಧದ ಮೊದಲು ವಾರಕ್ಕೆ 3 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕುವೈಟ್‌-ಮಂಗಳೂರು ನಡುವೆ ಯಾನ ನಡೆಸುತ್ತಿದ್ದವು.

ಯುದ್ಧದ ಸಂದರ್ಭದಲ್ಲಿ ಕ್ಷಿಪಣಿ ದಾಳಿಗೆ ತುತ್ತಾಗಿ ಕುವೈಟ್‌ ವಿಮಾನ ನಿಲ್ದಾಣ ಹಾನಿಗೊಂಡಿತ್ತು. ಅದನ್ನು ಸರಿಪಡಿಸಲಾಯಿತಾದರೂ ತೀರಾ ಇತ್ತೀಚೆಗಿನ ವರೆಗೂ ಜಝೀರಾ ಏರ್‌ಲೈನ್ಸ್‌ ಹಾಗೂ ಕುವೈಟ್‌ ಏರ್‌ವೆàಸ್‌ ಮಾತ್ರವೇ ಕಾರ್ಯಾಚರಿಸುತ್ತಿದ್ದವು. ವಿದೇಶಿ ವಿಮಾನಗಳು ನಿಧಾನವಾಗಿ ಆರಂಭವಾಗುತ್ತಿವೆ.

Vishwa News 24

Recent Posts

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

54 minutes ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

2 hours ago

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…

2 hours ago

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ -vishwanews24

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…

2 hours ago

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

3 hours ago

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago