Featured

ಅಕ್ಟೋಬರ್ 1ರಿಂದ ದೇಶಾದ್ಯಂತ ಏಕರೂಪದ ಡಿಎಲ್ ಮತ್ತು ಆರ್‌ಸಿ -Vishwanews24

ನವದೆಹಲಿ : ಅಕ್ಟೋಬರ್ 1 ರಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ. ನಕಲಿ ಫೋರ್ಜರಿ ಮಾಡಿದ ತಡೆಯುವ ಉದ್ದೇಶದಿಂದ ಅ.1 ರಿಂದ ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರ ದೇಶಾದ್ಯಂತ ಏಕರೂಪದಲ್ಲಿ ವಿತರಿಸಲು ಸಾರಿಗೆ ಸಚಿವಾಲಯ ನಿರ್ಧರಿಸಿದೆ.

ಹೊಸ ಡಿಎಲ್ ಮತ್ತು ಆರ್ ಸಿಗಳಲ್ಲಿ ಕ್ಯೂಆರ್ ಕೋಡ್ ಇರಲಿದೆ. ಕೇಂದ್ರೀಯ ಆನ್ ಲೈನ್ ಡೇಟಾ ಬೇಸ್ ನಲ್ಲಿ ಚಾಲಕ ಮತ್ತು ವಾಹನಕ್ಕೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿ, ಸುಲಭ ಮತ್ತು ತ್ವರಿತವಾಗಿ ವಿವರಗಳ ಪರಾಮರ್ಶೆಗೆ ಅವಕಾಶ ಕಲ್ಪಿಸಲಾಗುತ್ತದೆ.

ಸ್ಮಾರ್ಟ್‌ ಡಿಎಲ್‌ ಮತ್ತು ಆರ್‌ಸಿಗಳಲ್ಲಿ ಮೈಕ್ರೋಚಿಪ್‌ಗಳನ್ನು ಅಳವಡಿಸಲಿದ್ದು, ಕ್ಯೂ ಆರ್‌ ಕೋಡ್‌ಗಳನ್ನೂ ಹೊಂದಿರುತ್ತವೆ.ಅವುಗಳಲ್ಲಿ ಎನ್‌ಎಫ್‌ಸಿ (ನಿಯರ್ ಫೀಲ್ಡ್‌ ಕಮ್ಯುನಿಕೇಶನ್‌) ವೈಶಿಷ್ಟ್ಯವನ್ನೂ ಅಳವಡಿಸಲಾಗುತ್ತಿದ್ದು ಮೆಟ್ರೋ ಮತ್ತು ಎಟಿಎಂ ಕಾರ್ಡ್‌ಗಳ ರೀತಿಯಲ್ಲಿ ಬಳಸಬಹುದಾಗಿದೆ. ಇದರಿಂದ ಟ್ರಾಫಿಕ್‌ ಪೊಲೀಸರು ವಿಶೇಷ ಸಾಧನಗಳ ಮೂಲಕ (ಹ್ಯಾಂಡ್‌ಹೆಲ್ಡ್‌ ಡಿವೈಸಸ್‌) ಈ ಕಾರ್ಡ್‌ಗಳನ್ನು ಸ್ಕ್ಯಾನ್ ಮಾಡಿ ಎಲ್ಲ ವಿವರ ಪಡೆಯಬಹುದಾಗಿದೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಈ ಪ್ರಮಾಣಪತ್ರಗಳ ನೋಟ, ಬಣ್ಣ, ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago