ನವದೆಹಲಿ : ಅಕ್ಟೋಬರ್ 1 ರಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ. ನಕಲಿ ಫೋರ್ಜರಿ ಮಾಡಿದ ತಡೆಯುವ ಉದ್ದೇಶದಿಂದ ಅ.1 ರಿಂದ ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರ ದೇಶಾದ್ಯಂತ ಏಕರೂಪದಲ್ಲಿ ವಿತರಿಸಲು ಸಾರಿಗೆ ಸಚಿವಾಲಯ ನಿರ್ಧರಿಸಿದೆ.
ಹೊಸ ಡಿಎಲ್ ಮತ್ತು ಆರ್ ಸಿಗಳಲ್ಲಿ ಕ್ಯೂಆರ್ ಕೋಡ್ ಇರಲಿದೆ. ಕೇಂದ್ರೀಯ ಆನ್ ಲೈನ್ ಡೇಟಾ ಬೇಸ್ ನಲ್ಲಿ ಚಾಲಕ ಮತ್ತು ವಾಹನಕ್ಕೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿ, ಸುಲಭ ಮತ್ತು ತ್ವರಿತವಾಗಿ ವಿವರಗಳ ಪರಾಮರ್ಶೆಗೆ ಅವಕಾಶ ಕಲ್ಪಿಸಲಾಗುತ್ತದೆ.
ಸ್ಮಾರ್ಟ್ ಡಿಎಲ್ ಮತ್ತು ಆರ್‌ಸಿಗಳಲ್ಲಿ ಮೈಕ್ರೋಚಿಪ್‌ಗಳನ್ನು ಅಳವಡಿಸಲಿದ್ದು, ಕ್ಯೂ ಆರ್ ಕೋಡ್‌ಗಳನ್ನೂ ಹೊಂದಿರುತ್ತವೆ.ಅವುಗಳಲ್ಲಿ ಎನ್‌ಎಫ್‌ಸಿ (ನಿಯರ್ ಫೀಲ್ಡ್ ಕಮ್ಯುನಿಕೇಶನ್) ವೈಶಿಷ್ಟ್ಯವನ್ನೂ ಅಳವಡಿಸಲಾಗುತ್ತಿದ್ದು ಮೆಟ್ರೋ ಮತ್ತು ಎಟಿಎಂ ಕಾರ್ಡ್‌ಗಳ ರೀತಿಯಲ್ಲಿ ಬಳಸಬಹುದಾಗಿದೆ. ಇದರಿಂದ ಟ್ರಾಫಿಕ್ ಪೊಲೀಸರು ವಿಶೇಷ ಸಾಧನಗಳ ಮೂಲಕ (ಹ್ಯಾಂಡ್‌ಹೆಲ್ಡ್ ಡಿವೈಸಸ್) ಈ ಕಾರ್ಡ್‌ಗಳನ್ನು ಸ್ಕ್ಯಾನ್ ಮಾಡಿ ಎಲ್ಲ ವಿವರ ಪಡೆಯಬಹುದಾಗಿದೆ.
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಈ ಪ್ರಮಾಣಪತ್ರಗಳ ನೋಟ, ಬಣ್ಣ, ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…