ಬೆಂಗಳೂರು: ನೆರೆ ಪ್ರವಾಹ ಪರಿಹಾರ ಕಾರ್ಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿರುವ ವಿಷಯಕ್ಕೆ ಸಂಬಂಧಿದಂತೆ ಅಕ್ಟೋಬರ್ 10ರಂದು ಸರ್ಕಾರದ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.
ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಇಂದು ಪ್ರತಿಭಟನಾ ಪೂರ್ವಭಾವಿ ಸಿದ್ದತಾ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕುರಿತು ಸಭೆ ನಡೆಸಲಾಗುತ್ತಿದೆ. ಇನ್ನು ಈಸ ಸಭೆಯೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ಅಲ್ಲದೇ ಸಭೆಯಲ್ಲಿ ಪ್ರತಿಭಟನೆ ರೂಪು ರೇಷೆಗಳ ಬಗ್ಗೆ ಚರ್ಚೆ ಆಗಲಿದ್ದು, ನಾಳಿನ ಪ್ರತಿಭಟನೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚೆ ಹಾಗೂ ಸದನದ ಒಳಗೆ ಹೋರಾಟ ಮಾಡುವ ಕುರಿತು ಸಹ ಚರ್ಚೆ ಆಗಲಿದೆ.
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಸಾಕಷ್ಟು ಜನರಿಗೆ ಮನೆ, ಜಾನುವಾರುಗಳು, ಮತ್ತಿತರ ಸೌಲಭ್ಯಗಳು ಇಲ್ಲದಂತಾಗಿದೆ. ಈ ವಿಷಯಕ್ಕೆ ಸಂಬಂಧಿದಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವೈಮಾನಿಕ ಸಮೀಕ್ಷೆ ಕೂಡ ಮಾಡಿತ್ತು ಆದರೆ ಸಮೀಕ್ಷೆ ನಡೆದು ಒಂದೂವರೆ ತಿಂಗಳುಗಳೇ ಕಳೆದಿವೆ.ಆದರೆ ಪರಿಹಾರ ಮಾತ್ರ ಶೂನ್ಯವಾಗಿತ್ತು. ಮೊನ್ನೆಯಷ್ಟೇ ಕೇಂದ್ರದಿಂದ 1200 ಕೋಟಿಯಷ್ಟು ಪರಿಹಾರದ ನೆರವು ನೀಡಿದ್ದಾರೆ. ಆದರೂ ಪರಿಹಾರ ಬಹಳ ಕಡಿಮೆಯಾಗಿದೆ ಎಂಬ ಆರೋಪ ವಿರೋಧ ಪಕ್ಷದ ನಾಯಕರಿಂದ ಕೇಳಿ ಬರುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…