Featured

ಅಕ್ಟೋಬರ್ 2 ರಂದು‌ ಭವ್ಯ ಮೆರವಣಿಗೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆ -Vishwanews24

ಬಂಟ್ವಾಳ: ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಅಕ್ಟೋಬರ್ 2 ರಂದು‌ ದಾನಿಗಳಿಂದ ಸಮರ್ಪಣೆಯಾಗಲಿರುವ ಬ್ರಹ್ಮರಥವನ್ನು ಬಿ.ಸಿ.ರೋಡಿನಲ್ಲಿ ಅಕ್ಟೋಬರ್ 1 ರಂದು‌ ಬಂಟ್ವಾಳ ತುಳುಕೂಟ ಮತ್ತಿತರ ಸಂಘಟನೆಗಳ ವತಿಯಿಂದ ಸ್ವಾಗತಿಸಿ ಬೀಳ್ಕೊಡಲಾಗುವುದು ಎಂದು ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ಮತ್ತು ಪ್ರಧಾನ ಕಾರ್ಯದರ್ಶಿ ಎಚ್ಕೆ.ನಯನಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆಯ ಪೂರ್ವಭಾವಿಯಾಗಿ ಸೆ. 30ರಂದು ಬೆಳಿಗ್ಗೆ 9ಗಂಟೆಗೆ ಕೋಟೇಶ್ವರದಿಂದ ಸುಬ್ರಹ್ಮಣ್ಯದವರೆಗೆ ಭವ್ಯ ಮೆರವಣಿಗೆ ಹೊರಡಲಿದೆ.  ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬ್ರಹ್ಮರಥದ ಸಮರ್ಪಣೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

2018ರ ಮಾರ್ಚ್‌ 15ರಂದು ಬ್ರಹ್ಮರಥದ ಕೆತ್ತನೆ ಕೆಲಸ ಆರಂಭಿಸಲಾಗಿದ್ದು, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ರಥವನ್ನು ನಿರ್ಮಿಸಿದ್ದಾರೆ. ಮಹಾಭಾರತ ಹಾಗೂ ರಾಮಾಯಣದಂತಹ ಅಭೂತ ಪೂರ್ವ ಶಿಲ್ಪ ಕಲಾಕೃತಿಯನ್ನು ರಥದಲ್ಲಿ ಕೆತ್ತಲಾಗಿದೆ ಎಂದರು.

ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿ ತುಳುಕೂಟ, ತಾಲೂಕಿನ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗೂ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತಾದಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಬ್ರಹ್ಮರಥಕ್ಕೆ ಭವ್ಯ ಸ್ವಾಗತ ನೀಡಲಾಗುವುದು. ರಥಕ್ಕೆ ಪುಷ್ಪಾರ್ಚಣೆಯೊಂದಿಗೆ ಸ್ವಾಗತಿಸಿ ಅಲ್ಲಿಂದ ಚೆಂಡೆವಾದನ ಮತ್ತಿತರ ಸಾಂಸ್ಕ್ರತಿಕ ಪ್ರದರ್ಶನಗಳೊಂದಿಗೆ ರಾಜರಸ್ತೆಯಲ್ಲಿ ಸಾಗಿ ಬಿ.ಸಿ.ರೋಡು ವೃತ್ತ ಬಳಿ ಬ್ರಹ್ಮರಥವನ್ನು ಶ್ರೀ ಕ್ಷೇತ್ರಕ್ಕೆ ಬೀಳ್ಕೊಡಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಶ್ರೀನಿವಾಸ್‌ ಶೆಟ್ಟಿಗಾರ್‌ ಬಾರ್ಕೂರು, ಗೌರವ ಸಲಹೆಗಾರ ಸುಧಾಕರ್‌ ರಾವ್‌, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್‌, ಕಾರ್ಯಾಧ್ಯಕ್ಷ ಶರತ್‌ ಶೆಟ್ಟಿ, ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ ಇದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago