Featured

ಅಕ್ಟೋಬರ್ 28 ರಂದು ಮೀನು ಮಾರಾಟ ಫೆಡರೇಶನ್ ನೇತೃತ್ವದಲ್ಲಿ ಮಲ್ಪೆ ಸಮುದ್ರ ಮಧ್ಯದಲ್ಲಿ ವಿಶಿಷ್ಟವಾಗಿ ಕೋಟಿ ಕಂಠ ಗಾಯನ ಆಯೋಜನೆ : ಯಶ್ ಪಾಲ್ ಸುವರ್ಣ -Vishwanews24

ಅಕ್ಟೋಬರ್ 28 ರಂದು ಮೀನು ಮಾರಾಟ ಫೆಡರೇಶನ್ ನೇತೃತ್ವದಲ್ಲಿ ಮಲ್ಪೆ ಸಮುದ್ರ ಮಧ್ಯದಲ್ಲಿ ವಿಶಿಷ್ಟವಾಗಿ ಕೋಟಿ ಕಂಠ ಗಾಯನ ಆಯೋಜನೆ : ಯಶ್ ಪಾಲ್ ಸುವರ್ಣ

ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಮಹಾಲಕ್ಷ್ಮೀ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅಕ್ಟೋಬರ್ 28 ಪೂರ್ವಾಹ್ನ 10 ಗಂಟೆಗೆ ಮಲ್ಪೆ ಅರಬ್ಬಿ ಸಮುದ್ರ ಮಧ್ಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಯೋಜಿಸಿರುವುದಾಗಿ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
67ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಉತ್ಸಹಗಳಿಂದ ಅರ್ಥಪೂರ್ಣವಾಗಿ ಆಯೋಜಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರ  ಕಲ್ಪನೆಯ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಅಭಿಯಾನಕ್ಕೆ ಈ ಕಾರ್ಯಕ್ರಮ ಮೆರುಗು ನೀಡಲಿದೆ.
ಸಮುದ್ರ ಮಧ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಮೀನುಗಾರರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಸಂಗೀತ ಕಲಾವಿದರು  ಹಾಗೂ ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ  ಕನ್ನಡ ಗೀತೆಗಳ ಗಾಯನದ ಮೂಲಕ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದರೆ
Vishwa News 24

Recent Posts

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

19 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago