Featured

ಅಕ್ರಮ ದತ್ತು ಮಗು ಪ್ರಕರಣ : ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ – Vishwanews24

ಅಕ್ರಮವಾಗಿ  ಮಗು ದತ್ತು ಪಡೆದ ಪ್ರಕರಣ : ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ

ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.

ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು (ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.

ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ನಿನ್ನೆ ಬೆಂಗಳೂರಿಗೆ ತೆರಳಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago