ಬೆಂಗಳೂರು: ಸ್ವಚ್ಛ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಚಿವರು ನಿನ್ನೆ ರಾತ್ರಿ ಬೆಂಗಳೂರಿನ, ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ ಎಂದು ಹೇಳಿದರು.
” ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ದಾರಿ ತುಳಿಯುತ್ತೇನೆ” ಎಂದು ಭಾವುಕರಾಗಿ ಹೇಳಿದರು.
ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವವಿದ್ಯಾಲಯದ ಶಂಕು ಸ್ಥಾಪನ ಕಾರ್ಯಕ್ರಮವೂ ನಡೆಯಲಿದೆ ಎಂದ ಸಚಿವರು, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ, ಎಂದರು.
ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಸಚಿವರು ಹೇಳಿದರು.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…