ಬೆಂಗಳೂರು: ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ನಿಯಮ ಬಾಹಿರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸರ್ಕಾರ ಸಂಚು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ನಿಮ್ಮ ಮೂಗಿನ ನೇರದಲ್ಲೇ ಅಧಿಕಾರಿಗಳು ಅಕ್ರಮ ಮತದಾರರನ್ನು ಪಟ್ಟಿಗೆ ಸೇರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಬಾಂಗ್ಲಾದೇಶಿಯರನ್ನು ಓಡಿಸಿದ ಮೇಲೆ ಅವರೆಲ್ಲಾ ಕರ್ನಾಟಕಕ್ಕೆ ವಲಸೆ ಬಂದಿದ್ದಾರೆ. ಈಗ ಕರ್ನಾಟಕದಲ್ಲಿ ಆಶ್ರಯ ಪಡೆದಿರುವ ಅಕ್ರಮ ಬಾಂಗ್ಲಾದೇಶದ ಮತದಾರರನ್ನು ಸಕ್ರಮ ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ದೂರಿದರು.
ಇದನ್ನೂ ಓದಿ:
ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ವಿಡಿಯೋಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್ ಕಳೆದ ಏಳೆಂಟು ವರ್ಷಗಳಿಂದಲೂ ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಕಲಬುರ್ಗಿಯಲ್ಲಿ ಇದೇ ಅಕ್ರಮ ಕೆಲಸವನ್ನು ಮಾಡುತ್ತಾ ಬಂದಿದೆ ಎಂದು ಹೇಳಿದರು.
ಈ ಅಕ್ರಮ ವಲಸಿಗರಿಗೆ ಯಾವುದೇ ಸೂಕ್ತ ದಾಖಲೆಗಳಿಲ್ಲದಿದ್ದರೂ, ಸೈಬರ್ ಕೇಂದ್ರಗಳ ಮೂಲಕ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಲಾಗುತ್ತಿದೆ. ಅಷ್ಟೇ ಅಲ್ಲದೆ, ಇವರಿಗೆ ಶಾಶ್ವತ ವಾಸದ ಪ್ರಮಾಣ ಪತ್ರ ನೀಡಲು ಸ್ವತಃ ಸಿಎಂ ತೀರ್ಮಾನಿಸಿದ್ದಾರೆ. ಇದೆಲ್ಲವೂ 2028ರ ವಿಧಾನಸಭಾ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ನಡೆಸುತ್ತಿರುವ ಸಂಚು ಎಂದು ಸಿಟ್ಟು ಹೊರಹಾಕಿದರು.
ಇದನ್ನೂ ಓದಿ:
ಚುನಾವಣಾ ನಿಯಮಾವಳಿಗಳ ಉಲ್ಲಂಘನೆಯನ್ನು ಪ್ರಸ್ತಾಪಿಸಿದ ಸಚಿವರು, ರಾಜ್ಯ ಸರ್ಕಾರದ ಮೌಖಿಕ ಆದೇಶದ ಮೇಲೆ ಅಧಿಕಾರಿಗಳು ಹಾಗೂ ಬಿಎಲ್‌ಒಗಳು ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳನ್ನು ಮಸೀದಿಗಳು, ಶಾದಿ ಮಹಲ್‌ಗಳು ಹಾಗೂ ಕಲ್ಯಾಣ ಮಂಟಪಗಳಲ್ಲಿ ಕೂಡಿ ಹಾಕಿ ಸಾಮೂಹಿಕವಾಗಿ ಗಣತಿ ನಮೂನೆ ಅರ್ಜಿಗಳನ್ನು ಕೊಡಿಸಲಾಗುತ್ತಿದೆ ಎಂದರು.
ಬೆಂಗಳೂರಿನ ಬಹಳಷ್ಟು ಮೂಲ ಮತದಾರರು ಬೇರೆ ಕಡೆಗೆ ಶಿಫ್ಟ್ ಆಗಿದ್ದಾರೆ. ಆದರೆ ಅವರ ಜಾಗಕ್ಕೆ ಅಕ್ರಮ ಮತದಾರರನ್ನು ತರಲು ಬಿಎಲ್‌ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರ ನಮ್ಮ ಬೂತ್ ಮಟ್ಟದ ಏಜೆಂಟರನ್ನು (BLA) ಹೆದರಿಸುತ್ತಿದ್ದು, ಕೇವಲ ಕಾಂಗ್ರೆಸ್‌ನ ಬಿಎಲ್‌ಎಗಳನ್ನು ಮಾತ್ರ ಕರೆದುಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:
ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ಪರಿಷ್ಕರಣೆ ನಡೆಸಬೇಕು ಎಂದು ಸಚಿವರು ಒತ್ತಾಯಿಸಿದರು. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ಅತ್ಯಂತ ಶುದ್ಧವಾದ ಮತ್ತು ಕಠಿಣವಾದ ಮತಪಟ್ಟಿ ಪರಿಷ್ಕರಣೆ ಮಾಡಿದೆ. ಅದೇ ಮಾದರಿಯ ಕ್ರಮ ಈಗ ಕರ್ನಾಟಕದಲ್ಲೂ ಆಗಬೇಕು. ಈ ಇಡೀ ಅಕ್ರಮ ಪ್ರಕ್ರಿಯೆಯ ವಿರುದ್ಧ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…