Featured

ಅಕ್ರಮ ಗೋ ಸಾಗಾಟದ ವಿಷಯದಲ್ಲಿ ಕೈ ಹಾಕುವ ಯೋಚನೆ ಮಾಡಿದ್ದರೆ ನೀವು ನಿಮ್ಮ ಕೈಗಳನ್ನು ಮರೆತು ಬಿಡಿ : ದುರ್ಗವಾಹಿನಿ ಸಂಚಾಲಕಿ ದಿವ್ಯಾ ಮಲ್ಯ -Vishwanews24

ಬಂಟ್ವಾಳ: “ಅಕ್ರಮ ಗೋ ಸಾಗಾಟದ ವಿಷಯದಲ್ಲಿ ಕೈ ಹಾಕುವ ಯೋಚನೆ ಮಾಡಿದ್ದರೆ ನೀವು ನಿಮ್ಮ ಕೈಗಳನ್ನು ಮರೆತು ಬಿಡಿ” ಎಂದು ದುರ್ಗವಾಹಿನಿಯ ಸಂಚಾಲಕಿ ದಿವ್ಯಾ ಮಲ್ಯ ಹೇಳಿದ್ದಾರೆ.

ಬುಧವಾರ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣಾ ವೇದಿಕೆ ಮಂಗಳೂರು ವತಿಯಿಂದ ಬಂಟ್ವಾಳದಲ್ಲಿ ಗೋವಂಶದ ಮೇಲಿನ ಕ್ರೌರ್ಯ, ಗೋಕಳ್ಳತನ, ಅಕ್ರಮ ಗೋಸಾಗಾಟ ವಿರುದ್ಧ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, “ಹಿಂದೂ ಹೆಣ್ಣು ಮಕ್ಕಳ ತಂಟೆಗೆ ಬಂದರೆ ನಿಮ್ಮ ಕಣ್ಣುಗಳನ್ನು ಹಾಗೂ ಅಕ್ರಮ ಗೋ ಸಾಗಾಟದ ವಿಷಯದಲ್ಲಿ ನಿಮ್ಮ ಕೈಗಳನ್ನು ಮರೆತು ಬಿಡುವುದು ಒಳ್ಳೆಯದು” ಎಂದು ಎಚ್ಚರಿಸಿದ್ದಾರೆ.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿದರು. ಗೋವಂಶವನ್ನು ನಿರ್ಮೂಲನೆ ಮಾಡಲು ಪ್ರಚೋದಿಸುವ ಅಕ್ರಮ ಗೋಸಾಗಾಟವನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ, ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಅಧ್ಯಕ್ಷ ನರಸಿಂಹ ಶೆಟ್ಟಿ, ವಿಶ್ವ ಹಿಂದು ಪರಿಷತ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬಜರಂಗದಳ ಬಂಟ್ವಾಳ ಪ್ರಖಂಡ ಸಂಚಾಲಕ ಅಕೇಶ್, ಪ್ರಮುಖರಾದ ಗುರುರಾಜ ಬಂಟ್ವಾಳ, ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ವಜ್ರನಾಥ ಕಲ್ಲಡ್ಕ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago